ADVERTISEMENT

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ₹6.60 ಕೋಟಿ ಮಂಜೂರು: ಶಾಸಕ ಯು.ಬಿ. ಬಣಕಾರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 16:26 IST
Last Updated 18 ಫೆಬ್ರುವರಿ 2024, 16:26 IST
ಯು.ಬಿ.ಬಣಕಾರ
ಯು.ಬಿ.ಬಣಕಾರ   

ಹಿರೇಕೆರೂರು: ರಟ್ಟೀಹಳ್ಳಿ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ವಿವಿಧ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿ ಮತ್ತು ಜೀರ್ಣೋದ್ದಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಜರಾಯಿ ಇಲಾಖೆಯ ಮೂಲಕ ₹6.60 ಕೋಟಿ ಮಂಜೂರು ಮಾಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿ ಮತ್ತು ಜೀರ್ಣೋದ್ಧಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಜರಾಯಿ ಇಲಾಖೆಯ ಮೂಲಕ ₹6.60 ಕೋಟಿಗಳನ್ನು 69 ವಿವಿಧ ಗ್ರಾಮಗಳ ದೇವಸ್ಥಾನಗಳ ಅಭಿವೃದ್ಧಿಗೆ ನೀಡಲಾಗಿದೆ ಎಂದರು.

ತಾಲ್ಲೂಕಿನ ಹಲವಾರು ಗ್ರಾಮದ ಜನರು ಬಹು ದಿನಗಳಿಂದ ತಮ್ಮ ಗ್ರಾಮಗಳ ದೇವಸ್ಥಾನದ ಅಭಿವೃದ್ಧಿಗೆ ಹಣ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ತಾಲ್ಲೂಕಿನ 69 ಗ್ರಾಮಗಳ ದೇವಸ್ಥಾನಗಳ ಅಭಿವೃದ್ಧಿಯಾಗುತ್ತಿದೆ. ಮುಜರಾಯಿ ಇಲಾಖೆಯ ₹35 ಲಕ್ಷ ಅನುದಾನ ನೀಡಿದ್ದು ,ಅಭಿವೃದ್ಧಿ ಪಡಿಸಬೇಕಾದ ದೇಸ್ಥಾನಗಳ ಪಟ್ಟಿ ಕೇಳಿದ್ದು ಈಗಾಗಲೇ ಪಟ್ಟಿ ಸಿದ್ದಪಡಿಸಿ ಮುಜರಾಯಿ ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಹಿರೇಕೆರೂರು ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ದೊಡ್ಡ ಮೊತ್ತ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿ ಮತ್ತು ಜೀರ್ಣೋದ್ದಾರ ಕಾಮಗಾರಿಗಳಿಗೆ ಬಂದಿದ್ದು, ತಾಲ್ಲೂಕಿನ ಜನತೆಯ ಪರವಾಗಿ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.