ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೋಟಿಹಾಳ ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಹೊರತೆಗೆದು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿರುವ ಜಿಲ್ಲಾ ಪೊಲೀಸರು, 3 ಟಿಪ್ಪರ್ ಲಾರಿಗಳು ಹಾಗೂ ಹಿಟಾಚಿ ಯಂತ್ರ ಜಪ್ತಿ ಮಾಡಿದ್ದಾರೆ.
‘ಮರಳು ಅಕ್ರಮ ದಂಧೆ ಬಗ್ಗೆ ಮಾಹಿತಿ ಆಧರಿಸಿ ಜಿಲ್ಲಾ ಅಪರಾಧ ದಾಖಲಾತಿ ವಿಭಾಗದ ಪಿಎಸ್‌ಐ ಸುಜಾತಾ ಪಾಟೀಲ ನೇತೃತ್ವದ ತಂಡ, ಕಾರ್ಯಾಚರಣೆ ನಡೆಸಿತ್ತು. ತುಂಗಭದ್ರಾ ನದಿ ಪಾತ್ರದಲ್ಲಿ ಹಿಟಾಚಿ ಯಂತ್ರದಿಂದ ಮರಳು ಅಗೆದು ಟಿಪರ್‌ಗಳಿಗೆ ತುಂಬಿಸುತ್ತಿದ್ದುದ್ದು ಕಂಡುಬಂದಿತ್ತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.
ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮತ್ತಷ್ಟು ಆರೋಪಿಗಳಿಗೆ ಶೋಧ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.