ADVERTISEMENT

ಶಿಗ್ಗಾವಿ ಉಪಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಖಾದ್ರಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 9:04 IST
Last Updated 30 ಅಕ್ಟೋಬರ್ 2024, 9:04 IST
<div class="paragraphs"><p>ನಾಮಪತ್ರ ವಾಪಸು ಪಡೆದು ಚುನಾವಣಾಧಿಕಾರಿ ಕಚೇರಿಯಿಂದ ಹೊರಬಂದ ಸೈಯದ್ ಅಜ್ಜಂಪೀರ ಖಾದ್ರಿ</p></div>

ನಾಮಪತ್ರ ವಾಪಸು ಪಡೆದು ಚುನಾವಣಾಧಿಕಾರಿ ಕಚೇರಿಯಿಂದ ಹೊರಬಂದ ಸೈಯದ್ ಅಜ್ಜಂಪೀರ ಖಾದ್ರಿ

   

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ವಾಪಸು ಪಡೆದಿದ್ದಾರೆ.

ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ಬಂದರು.

ADVERTISEMENT

ಸಚಿವರು, ಶಾಸಕರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿಯೇ ಖಾದ್ರಿ ಅವರು ನಾಮಪತ್ರ ವಾಪಸು ಪಡೆದರು.

ನಾಮಪತ್ರ ವಾಪಸ್ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಖಾದ್ರಿ, ‘ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ಸಿದ್ದರಾಮಯ್ಯ ಅವರ ಶಿಷ್ಯ ನಾನು. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.