ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಆರೋಪದಡಿ ₹2.68 ಲಕ್ಷವನ್ನು ಎಫ್‌ಎಸ್‌ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣವಿತ್ತು. ಇದನ್ನು ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಬಗ್ಗೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದರು. ಪ್ರತಿಭಟನೆ ನಡೆಸಿದ್ದರು. ಪೊಲೀಸರು ಹಾಗೂ ಕೆಆರ್‌ಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿತ್ತು.
ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು, ಹಣ ಜಪ್ತಿ ಮಾಡಿದ್ದಾರೆ.
ಆರೋಪಿ ಸುಭಾಷ್ ಗಡ್ಡೆಪ್ಪನವರ ಅವರ ವಿರುದ್ಧ ಎನ್‌ಸಿಆರ್ ದಾಖಲಿಸಲಾಗಿದೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.