ರಾಣೆಬೆನ್ನೂರು: ‘ನಗರದ ಕೆ.ಎಲ್.ಇ ಸಂಸ್ಥೆಯ ರಾಜರಾಜೇಶ್ವರಿ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಮೈದಾನದಲ್ಲಿ ನ.11 ರಂದು ಬೆಳಿಗ್ಗೆ 10-30ಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಮತ್ತು ಐಕ್ಯೂಎಸಿ ನೇತೃತ್ವದಲ್ಲಿ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಏಕವಲಯ ಕೊಕ್ಕೊ ಹಾಗೂ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಕೆಎಲ್‌ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ವಿಪಿ ಲಿಂಗನಗೌಡರ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ರಾಜೇಶ್ವರಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಶಾಸಕ ಪ್ರಕಾಶ ಕೆ. ಕೋಳಿವಾಡ ಪಂದ್ಯಾವಳಿ ಉದ್ಘಾಟಿಸುವರು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಆಡಳಿತ ಮಂಡಳಿಯ ನಿರ್ದೇಶಕ ಬಿ.ಎಸ್.ಪಟ್ಟಣಶೆಟ್ಟಿ, ವಿ.ಬಿ.ಅಂಗಡಿ, ಜಯಣ್ಣ ಜಂಬಗಿ ಮುಖ್ಯಅತಿಥಿಗಳಾಗಿ ಆಗಮಿಸುವರು.
ನ.12 ರಂದು ಕೊಕ್ಕೊ ಮತ್ತು ಬಾಲ್ ಬ್ಯಾಡ್ಮಿಂಟನ್ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ವಿವಿಧ ಜಿಲ್ಲೆಗಳಿಂದ 250ಕ್ಕೂ ಅಧಿಕ ಕ್ರೀಡಾಪುಟಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಬಿಎಸ್ ಪಟ್ಟಣಶೆಟ್ಟಿ, ಜಯಣ್ಣ ಜಂಬಗಿ, ಪ್ರಾಚಾರ್ಯ ನಾರಾಯಣ ನಾಯಕ, ದೈಹಿಕ ನಿರ್ದೇಶಕ ಮಂಜಪ್ಪ ಸಿ.ಎಸ್. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.