ADVERTISEMENT

ವಿದ್ಯಾರ್ಥಿನಿ ಆತ್ಮಹತ್ಯೆ: ಸಿಐಡಿ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 16:19 IST
Last Updated 12 ಜುಲೈ 2024, 16:19 IST
ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಕರವೇ ಪ್ರವೀಣ ಶೆಟ್ಟಿ ಬಣ್ಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಕರವೇ ಪ್ರವೀಣ ಶೆಟ್ಟಿ ಬಣ್ಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಹಿರೇಕೆರೂರು: ದೂದಿಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ ಆತ್ಮಹತ್ಯೆ ಪ್ರಕರಣವನ್ನು ಕೂಡಲೇ ಎಫ್‌ಐಆರ್ ದಾಖಲಿಸಿ, ಸಿಐಡಿ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಕರವೇ ಪ್ರವೀಣ ಶೆಟ್ಟಿ ಬಣ್ಣದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಕರವೇ ಪ್ರವೀಣ ಶೆಟ್ಟಿ ಬಣದ ತಾಲ್ಲೂಕು ಘಟಕದ ಅಧ್ಯಕ್ಷ ಭರಮಪ್ಪ ಡಮ್ಮಳ್ಳಿ ಮಾತನಾಡಿ, ಶಿಕ್ಷಕರೊಬ್ಬರ ಪತ್ನಿ ಕಿರುಕುಳಕ್ಕೆ ವಿದ್ಯಾರ್ಥಿನಿ ಮನನೊಂದು ಚಿತ್ರ ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ಮಾಡಿ ಸಿಐಡಿ ತನಿಖೆಗೆ ಕೊಡಬೇಕು. ತಪ್ಪಿತಸ್ಥ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಹನುಮಂತಪ್ಪ ಬೋವಿ, ವಿಠಲ್ ನಾಮದೇವ, ರಟ್ಟೀಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ನಿಟ್ಟೂರು, ಅಶೋಕ ಬಡಿಗೇರ, ಈರಪ್ಪ ಬಣಕಾರ, ಅಜೀಜ್ ಮನ್ನಳ್ಳಿ, ರಾಜು ಸೆಣಬಿನ, ರಮೇಶ ಓಬಳೇರ, ರಾಜಶೇಖರ ಬಳ್ಳಾರಿ, ರತ್ನಮ್ಮ ಬಂಗಾರಪ್ಪನವರ, ಮಾಲತೇಶ ಹೆಬಸೂರ, ರಂಗಪ್ಪ ಬಾಲಪ್ಪನವರ, ಶಂಕರ ಇಟಗಿ, ದಾದಾಪೀರ ರಿಕಾಟಿ, ನಟರಾಜ ಸಜ್ಜನರ ಇದ್ದರು.

ADVERTISEMENT

ಎಬಿವಿಪಿ ಪ್ರತಿಭಟನೆ: ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ್ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಅಭಿಷೇಕ್ ದೊಡ್ಡಮನಿ ಮಾತನಾಡಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸದಿದ್ದಲ್ಲಿ ಎಬಿವಿಪಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ವಿಕಾಸ ಎನ್.ಜಿ., ಸಹನಾ ಪ್ಯಾಟಿ, ಪುಷ್ಪಾ ಯತ್ತಿನಹಳ್ಳಿ, ವಿನಾಯಕ್ ನೇಶ್ವಿ, ಸಂದೀಪ್ ಬಾಳಿಕಾಯಿ, ವಿನಾಯಕ ಕರ್ನುಲ್, ಪ್ರವೀಣ್ಣ ರಟ್ಟೀಹಳ್ಳಿ, ಭರತ್ ಹೊಸಹಳ್ಳಿ, ಅಭಿ ಮಡ್ಲೂರು, ಸೋನಿಯಾ ಕಮ್ಮಾರ್, ಬಸವರಾಜ ಓಲೇಕಾರ್ ಇದ್ದರು.

ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ್ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.