ADVERTISEMENT

ಕೆಲಸದಲ್ಲಿ ಕೌಶಲ ಅಳವಡಿಸಿಕೊಳ್ಳಿ: ಲಮಾಣಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 15:24 IST
Last Updated 10 ಜುಲೈ 2024, 15:24 IST
ರಟ್ಟೀಹಳ್ಳಿ ತಾಲ್ಲೂಕು ತಿಪ್ಪಾಯಿಕೊಪ್ಪ ಗ್ರಾಮದ ಗುರುಮೂಕಪ್ಪ ಶಿವಯೋಗಿಗಳ ಮಠದಲ್ಲಿ ಪ್ರದಾನಮಂತ್ರಿ ವಿಶ್ವಕರ್ಮ ಯೋಜನೆಯ ವೃತ್ತಿ ತರಬೇತಿ ಸಮಾರೋಪ ಸಮಾರಂಭವನ್ನು ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು
ರಟ್ಟೀಹಳ್ಳಿ ತಾಲ್ಲೂಕು ತಿಪ್ಪಾಯಿಕೊಪ್ಪ ಗ್ರಾಮದ ಗುರುಮೂಕಪ್ಪ ಶಿವಯೋಗಿಗಳ ಮಠದಲ್ಲಿ ಪ್ರದಾನಮಂತ್ರಿ ವಿಶ್ವಕರ್ಮ ಯೋಜನೆಯ ವೃತ್ತಿ ತರಬೇತಿ ಸಮಾರೋಪ ಸಮಾರಂಭವನ್ನು ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು   

ರಟ್ಟೀಹಳ್ಳಿ: ತಳಮಟ್ಟದ ಕರಕುಶಲ ವೃತ್ತಿಗಳನ್ನು ಗುರುತಿಸಿ ಉತ್ತೇಜಿಸುವ ಅಂಗವಾಗಿ ವಿಶ್ವಕರ್ಮ ಯೋಜನೆಯ ತರಬೇತಿ ಸಹಾಯವಾಗಲಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.

ತಾಲ್ಲೂಕಿನ ತಿಪ್ಪಾಯಿಕೊಪ್ಪದಲ್ಲಿ ಗುರುಮೂಕಪ್ಪ ಶಿವಯೋಗಿಗಳ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವೃತ್ತಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಠದ ಮಹಾಂತ ಸ್ವಾಮೀಜಿ, ಜಿಲ್ಲಾ ಕೌಶಲ್ಯಾಧಿಕಾರಿ ಸಂಜಯ ಕೋರೆ, ಕಾಲೇಜು ಪ್ರಾಚಾರ್ಯ ಎಸ್.ಪಿ. ಗೌಡರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಸೊಪ್ಪಿನ, ತರಬೇತಿದಾರೆ ಗೀತಾ ಕರಿಗಾರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.