ರಾಣೆಬೆನ್ನೂರು:ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಭಾನುವಾರ ಸಂಜೆ ನಗರದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಗರವು ವೇಗವಾಗಿ ಬೆಳೆಯುತ್ತಿದ್ದು, ವಾಹನ ದಟ್ಟಣೆಯೂ ಹೆಚ್ಚಾಗಿದೆ. ಹೀಗಾಗಿಬಸ್ ನಿಲ್ದಾಣ ಅತ್ಯಂತ ಚಿಕ್ಕದಾಗಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳೂ ಹೆಚ್ಚಾಗುತ್ತಿವೆ. ದೊಡ್ಡ ಬಸ್ ನಿಲ್ದಾಣ ನಿರ್ಮಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಇಲ್ಲಿನ ಜನತೆ ಮನವಿ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಆಗಿರುವ ಸಮಸ್ಯೆಯನ್ನು ಪರಿಶೀಲಿಸುವ ಸಲುವಾಗಿಯೇ ಇಂದು ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.
ನಗರದ ಬಸ್ ನಿಲ್ದಾಣದ ವ್ಯವಸ್ಥೆ ಬಗ್ಗೆ ಇಲ್ಲಿನ ಸಚಿವ ಆರ್.ಶಂಕರ್ ಜೊತೆಗೆ ಚರ್ಚಿಸಿದ್ದೇನೆ. ಅವರು ಈ ಬಗ್ಗೆ ಅನೇಕ ಬಾರಿ ತಿಳಿಸಿದ್ದಾರೆ. ನಗರದ ಹೊರಭಾಗದಲ್ಲಿ ಸೂಕ್ತವಾದ ಸ್ಥಳ ದೊರೆತರೆ, ಸ್ಥಳಾಂತರ ಮಾಡಲಾಗುವುದು ಎಂದು ಭರವಸೆ ನೀಡಿದರು.
ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಘಟಕದ ವ್ಯವಸ್ಥಾಪರಿಗೆ ಮತ್ತು ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ರೈತ ಮುಖಂಡ ಹನುಮಂತ ಕಬ್ಬಾರ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಬೆಳಗಾವಿ, ಘಟಕ ವ್ಯವಸ್ಥಾಪಕ ಚೇತನಕುಮಾರ, ನಿಯಂತ್ರಕ ಬಸವರಾಜ ಮೇಗಳಮನಿ, ರಮೇಶ ನಾಯಕ, ಬೋಡಕೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.