ಹಿರೇಕೆರೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅದರಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಇಲ್ಲಿಯ ಮಾಸೂರು ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮದ ಮಂಜುನಾಥ ಪುಟ್ಟಲಿಂಗಣ್ಣನವರ (35) ಹಾಗೂ ಯತ್ನಳ್ಳಿ ಗ್ರಾಮದ ಹನುಮಂತಪ್ಪ ನಾಮದೇವ (25) ಮೃತರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ, ಜಂಗಲ್ ಕಟಿಂಗ್ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇಬ್ಬರು ಬೈಕ್ನಲ್ಲಿ ಹೊರಟಿದ್ದರು. ಇದೇ ಸಂದರ್ಭದಲ್ಲಿ ಏಕಾಏಕಿ ಮರ ಬಿದ್ದಿತ್ತು. ಅದರಡಿ ಸಿಲುಕಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.