ADVERTISEMENT

ಕಲಬುರಗಿ | 500 ಕೆ.ಜಿ ಪ್ಲಾಸ್ಟಿಕ್‌ ವಶ: ₹12 ಸಾವಿರ ದಂಡ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 15:54 IST
Last Updated 23 ಜೂನ್ 2024, 15:54 IST
ಕಲಬುರಗಿಯ ಸೂಪರ್‌ ಮಾರ್ಕೆಟ್‌ನಲ್ಲಿರುವ ಮಹಾದೇವಿ ಟ್ರೇಡರ್ಸ್‌ ಮಳಿಗೆ ಮೇಲೆ ದಾಳಿ ನಡೆಸಿದ ಮಹಾನಗರ ಪಾಲಿಕೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದಾರೆ
ಕಲಬುರಗಿಯ ಸೂಪರ್‌ ಮಾರ್ಕೆಟ್‌ನಲ್ಲಿರುವ ಮಹಾದೇವಿ ಟ್ರೇಡರ್ಸ್‌ ಮಳಿಗೆ ಮೇಲೆ ದಾಳಿ ನಡೆಸಿದ ಮಹಾನಗರ ಪಾಲಿಕೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದಾರೆ   

ಕಲಬುರಗಿ: ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಗರದ ಸೂಪರ್‌ ಮಾರ್ಕೆಟ್‌ನಲ್ಲಿರುವ ಮಹಾದೇವಿ ಟ್ರೇಡರ್ಸ್‌ ಮತ್ತು ವಿಕಾಸ ಟ್ರೇಡರ್ಸ್‌ ಮಳಿಗೆಗಳ ಮೇಲೆ ಶುಕ್ರವಾರ ದಾಳಿ ನಡೆಸಿ ಅಂದಾಜು 500 ಕೆ.ಜಿ ಪ್ಲಾಸ್ಟಿಕ್‌ ವಶಪಡಿಸಿಕೊಂಡಿದ್ದಾರೆ. ಜೊತೆಗೆ ₹12,000 ದಂಡ ವಿಧಿಸಿದ್ದಾರೆ.

ಅಲ್ಲದೇ, ಮಾರ್ಕೆಟ್‌ನ ಇತರೆ ಮಳಿಗೆಗಳ ಮೇಲೆಯೂ ದಾಳಿ ಮಾಡಿದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಆದಂ ಪಟೇಲ್‌ ನೇತೃತ್ವದ ಅಧಿಕಾರಿಗಳ ತಂಡ, ‘ನಿಷೇಧಿತ ಪ್ಲಾಸ್ಟಿಕ್‌ ಉತ್ಪಾದನೆ, ದಾಸ್ತಾನು, ವಿತರಣೆ ಹಾಗೂ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಜೊತೆಗೆ ಭಾರಿ ದಂಡ ತೆರಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿತು.

ದಾಳಿಯಲ್ಲಿ ಪಾಲಿಕೆಯ ಆರೋಗ್ಯ ನಿರೀಕ್ಷಕ ಮಲ್ಲಿಕಾರ್ಜುನ ಹಾಗೂ ಮಂಡಳಿಯ ಸಿಬ್ಬಂದಿ ಸುಧಾ, ಶಾರದಾ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.