ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜುಲೈ 21 ಮತ್ತು 22ರಂದು ‘ಭಾರತೀಯ ಜ್ಞಾನ ವ್ಯವಸ್ಥೆ’ ಕುರಿತು ಕಾರ್ಯಾಗಾರ ನಡೆಯಲಿದೆ.
ಈ ಕುರಿತು ವಿಶ್ವವಿದ್ಯಾಲಯದಲ್ಲಿ ನಡೆದ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಮಾಹಿತಿ ನೀಡಿದರು.
’2020ರ ರಾಷ್ಟ್ರೀಯ ಶೈಕ್ಷಣಿಕ ನೀತಿಯು ಶಿಕ್ಷಣದ ಎಲ್ಲಾ ಹಂತಗಳಲ್ಲಿ ನಿಖರ ಮತ್ತು ವೈಜ್ಞಾನಿಕ ರೀತಿಯಲ್ಲಿ ಪಠ್ಯಕ್ರಮದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಅಳವಡಿಸಲು ಶಿಫಾರಸು ಮಾಡುತ್ತದೆ. ಅದರಂತೆ, ಯುಜಿಸಿ ಇತ್ತೀಚೆಗೆ ಉನ್ನತ ಶಿಕ್ಷಣ ಪಠ್ಯಕ್ರಮದಲ್ಲಿ ಭಾರತೀಯ ಜ್ಞಾನವನ್ನು ಅಳವಡಿಸಲು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದಕ್ಕೆ ಅನುಗುಣವಾಗಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಎರಡು ದಿನಗಳ ರಾಷ್ಟ್ರೀಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸುತ್ತಿದೆ. ಭಾರತೀಯ ಜ್ಞಾನದ ವಿವಿಧ ವಿಭಾಗಗಳ ಸಂಪನ್ಮೂಲ ವ್ಯಕ್ತಿಗಳು ಈ ಸಂದರ್ಭದಲ್ಲಿ ಮಾತನಾಡಲಿದ್ದಾರೆ’ ಎಂದು ತಿಳಿಸಿದರು.
ವಿಶ್ವವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಪ್ರೊ. ಬಸವರಾಜ. ಪಿ. ಡೋಣೂರ ಮಾತನಾಡಿ, ’ಈ ಕಾರ್ಯಾಗಾರವು ಭಾರತೀಯ ಜ್ಞಾನ ವ್ಯವಸ್ಥೆ ನಿರ್ದಿಷ್ಟ ವಿಭಾಗಗಳು ಮತ್ತು ಕ್ಷೇತ್ರಗಳಲ್ಲಿನ ತಜ್ಞರೊಂದಿಗೆ ಹೊಸ ಸಂಶೋಧನಾ ಆಲೋಚನೆಗಳನ್ನು ಚರ್ಚಿಸಲು ಯುವ ಸಂಶೋಧಕರಿಗೆ ಮತ್ತು ಶಿಕ್ಷಣತಜ್ಞರಿಗೆ ವೇದಿಕೆಯನ್ನು ಒದಗಿಸುತ್ತದೆ. ಕಾರ್ಯಾಗಾರದಲ್ಲಿ ಸುಮಾರು 250 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದರು.
ಹೆಚ್ಚಿನ ವಿವರಗಳಿಗಾಗಿ ಆಸಕ್ತ ಶಿಕ್ಷಣತಜ್ಞರು www.cuk.ac,.in ಅನ್ನು ಭೇಟಿ ಮಾಡಬಹುದು. ಈ ಸಂದರ್ಭದಲ್ಲಿ ಕಾರ್ಯಾಗಾರದ ಸಂಯೋಜಕರಾದ ಡಾ.ಬಸವರಾಜ ಕುಬಕಡ್ಡಿ, ಡಾ.ಆರ್.ಕೆ. ಚೈತನ್ಯ ಹಾಗೂ ಇತರ ಅಧ್ಯಾಪಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.