ಕಲಬುರಗಿ: ‘ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸಿದಾಗ ತಕ್ಷಣಕ್ಕೆ ಸ್ಪಂದಿಸಲು 65 ಆಂಬುಲೆನ್ಸ್‌ಗಳನ್ನು ಖರೀದಿಸಲಾಗುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಗುರುವಾರ ಪ್ರೇರಣಾ ಕಾರ್ಯಕ್ರಮ ಉದ್ಘಾಟಿಸಿದ ಅವರು, ‘ಹೆದ್ದಾರಿಗಳ ಅಪಘಾತ ವಲಯಗಳ ಸಮೀಪದ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲಾಗುವುದು’ ಎಂದರು.
‘ಆಸ್ಪತ್ರೆಗಳಿಗೆ ಸಲಕರಣೆ ಖರೀದಿ, ಸಿಬ್ಬಂದಿಗೆ ತರಬೇತಿ ನೀಡಲಾಗುವುದು, ₹45 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗುವುದು. ಮೂರು ತಿಂಗಳಲ್ಲಿ ಇಂಥ ಆಸ್ಪತ್ರೆಗಳು ಕಾರ್ಯಾರಂಭ ಮಾಡಲಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.