ADVERTISEMENT

ಕಲಬುರಗಿ: ಕೈಗಾರಿಕೆ ಸ್ಥಾಪನೆಗಾಗಿ 607 ಎಕರೆ ಜಮೀನು ಸ್ವಾಧೀನ; ಸಚಿವ ಎಂ.ಬಿ ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 14:27 IST
Last Updated 21 ಜುಲೈ 2024, 14:27 IST
ಸಚಿವ ಎಂ.ಬಿ ಪಾಟೀಲ
ಸಚಿವ ಎಂ.ಬಿ ಪಾಟೀಲ   

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಯ ಉದ್ದೇಶದಿಂದ ಕಳೆದ ಐದು ವರ್ಷಗಳಲ್ಲಿ ಕೆಐಎಡಿಬಿಯು 607.13 ಎಕರೆ ಜಮೀನು ಸ್ವಾಧೀನಪಡಿಸಿಕೊಂಡಿದೆ ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಬಿ.ಜಿ. ಪಾಟೀಲ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೈಗಾರಿಕೆಗಳ ಸ್ಥಾಪನೆಯ ಉದ್ದೇಶದಿಂದ ಯಾದಗಿರಿ ಜಿಲ್ಲೆಯಲ್ಲಿ 51.29 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

‘ಭೂಮಿಯನ್ನು ಕಳೆದುಕೊಂಡ ರೈತರಿಗೆ ಒಪ್ಪಂದದ ದರದಲ್ಲಿ ಭೂ ಪರಿಹಾರ ನಿಗದಿಪಡಿಸಿ ನೀಡಲಾಗುತ್ತದೆ. ಒಪ್ಪಂದದ ದರ ಒಪ್ಪದೇ ಇರುವ ಭೂ ಮಾಲೀಕರಿಗೆ ಸಾಮಾನ್ಯ ಐ ತೀರ್ಪು ರಚಿಸಿ ನಿಯಮಾನುಸಾರ ನ್ಯಾಯಾಲಯಕ್ಕೆ ಠೇವಣಿ ಇಡಲಾಗುತ್ತದೆ’ ಎಂದು ಲಿಖಿತ ಉತ್ತರದಲ್ಲಿ ಪಾಟೀಲ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.