ADVERTISEMENT

ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 5:45 IST
Last Updated 24 ಜೂನ್ 2024, 5:45 IST
<div class="paragraphs"><p>ಕಲಬುರಗಿಯ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಶಾಸಕ ಎಂ.ವೈ. ಪಾಟೀಲ ಭೇಟಿ ಮಾಡಿದರು.</p></div>

ಕಲಬುರಗಿಯ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ಶಾಸಕ ಎಂ.ವೈ. ಪಾಟೀಲ ಭೇಟಿ ಮಾಡಿದರು.

   

ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ನಗರದಲ್ಲಿ ವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ADVERTISEMENT

ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದರು.

'ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ಕಂದಾಯ ಇಲಾಖೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಎಲ್ಲೆಲ್ಲಿ ಅತಿವೃಷ್ಟಿ ಆಗುತ್ತದೆ, ಅಲ್ಲಿ ಎಚ್ಚರಿಕೆ ವಹಿಸಬೇಕು. ಪ್ರಾಣಹಾನಿ, ಜಾನುವಾರು ಹಾನಿ ತಪ್ಪಿಸಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು' ಎಂದು ಹೇಳಿದರು.

'ಕಳೆದ ಮೂರು ತಿಂಗಳು ಚುನಾವಣೆ ಇದ್ದುದರಿಂದ ಆಡಳಿತ ನಿಧಾನಗತಿಯಲ್ಲಿತ್ತು. ಚುನಾವಣೆ ಮುಗಿದ ಹಿನ್ನೆಲೆ ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಆಗುತ್ತದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.