ADVERTISEMENT

ಕಲಬುರಗಿ: ರಾಜಕೀಯ ಪಕ್ಷಗಳೊಂದಿಗೆ ಡಿ.ಸಿ. ಸಭೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2024, 6:25 IST
Last Updated 2 ಜೂನ್ 2024, 6:25 IST
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಯಕೀಯ ಪಕ್ಷಗಳ ಮುಖಂಡರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿದರು. ಎಡಿಸಿ ರಾಯಪ್ಪ ಹುಣಸಗಿ, ಡಿಸಿಎಫ್‌ ಸುಮಿತ್ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಪಾಲ್ಗೊಂಡಿದ್ದರು

ಕಲಬುರಗಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಜೂನ್ 4ರಂದು ಗುಲಬರ್ಗಾ ವಿ.ವಿ.ಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಕಲಬುರಗಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಶನಿವಾರ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದರು.

ಚುನಾವಣೆ ಘೋಷಣೆಯಾದ ದಿನದಿಂದ ಇದುವರೆಗೆ ನೀಡಿದ ಸಹಕಾರಕ್ಕೆ ಧನ್ಯವಾದ ತಿಳಿಸಿದ ಅವರು, ‘ಜೂನ್ 4ರ ಮತ ಎಣಿಕೆ ಕಾರ್ಯವೂ ಶಾಂತಿಯುತವಾಗಿ ನಡೆಯಲು ಎಲ್ಲಾ ರಾಜಕೀಯ ಪಕ್ಷಗಳು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಮತ ಎಣಿಕೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಸ್ಟ್ರಾಂಗ್ ರೂಂ ತೆರೆಯಲಾಗುವುದು. ಅಭ್ಯರ್ಥಿ ಅಥವಾ ಅವರ ಚುನಾವಣಾ ಏಜೆಂಟ್ ಬರಬಹುದು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ’ ಎಂದು ಫೌಜಿಯಾ ತರನ್ನುಮ್‌ ವಿವರಿಸಿದರು.

ADVERTISEMENT

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.