ADVERTISEMENT

ಶಹಾಬಾದ್ | ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ: ಆರೋಪ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 15:43 IST
Last Updated 27 ಜೂನ್ 2024, 15:43 IST
ರವಿ ರಾಠೋಡ್
ರವಿ ರಾಠೋಡ್   

ಶಹಾಬಾದ್: ನಗರದ ಕನಕದಾಸ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ₹4 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿ.ಸಿ ರಸ್ತೆ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆ. ಕೂಡಲೇ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ನಗರ ಸಭೆ ಸದಸ್ಯ ರವಿ ರಾಠೋಡ್‌ ಆಗ್ರಹಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್ ಯೋಜನೆ ಅಡಿಯಲ್ಲಿ ವರ್ತುಲ ರಸ್ತೆಯ ರಾಜ್ಯ ಹೆದ್ದಾರಿ 125 ಕನಕದಾಸ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಸಿ.ಸಿ ರಸ್ತೆ ನಿರ್ಮಾಣ ಕಾರ್ಯವನ್ನು ಗುತ್ತಿಗೆದಾರರು ಕೈಗೊಂಡಿದೆ’ ಎಂದರು.

2022ರಲ್ಲಿಯೇ ಕಾಮಗಾರಿ ಪೂರ್ಣವಾಗಬೇಕಿತ್ತು. ಆದರೆ, ಗುತ್ತಿಗೆದಾರರು ಇನ್ನೂ ಕಾಮಗಾರಿ ಪೂರ್ಣಗೊಳಿಸಿಲ್ಲ. ರಸ್ತೆ ನಿರ್ಮಾಣ ಯೋಜನೆಯ ಅನ್ವಯ ರಸ್ತೆ ನಿರ್ಮಾಣಕ್ಕೆ ಮರುಮ್ ಜಿಎಸ್‌ಬಿ ಹಾಕಿ 8 ಇಂಚ್‌ ಡಿಎಲ್‌ಸಿ ಹಾಕಬೇಕು, ಆದರೆ, ಕೇವಲ 6 ಇಂಚು ಮಾತ್ರ ಹಾಕುತ್ತಿದ್ದಾರೆ. ಈ ರಸ್ತೆ ಸಂಪೂರ್ಣ ಕಳಪೆಯಾಗಿದೆ. ಈಗಾಗಲೇ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆ ಅಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಎಇಇ ಅವರಿಗೂ ಕೂಡು ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.