ಜೇವರ್ಗಿ: ಬಸ್ ನಿಲ್ದಾಣ ಸಮೀಪದಲ್ಲಿ ₹ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ಮತ್ತು ಜಯಂತಿ ಕಾರ್ಯಕ್ರಮವನ್ನು ಏ.28ರಂದು ಆಯೋಜಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಹರನಾಳ ಹೇಳಿದರು.
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಂಜೆ 4.30ಕ್ಕೆ ಜರುಗುವ ಬಹಿರಂಗ ಸಭೆಗೆ ಬೀದರ್‌ನ ಅಣದೂರ ಬುದ್ಧವಿಹಾರದ ವರಜ್ಯೋತಿ ಬಂತೇಜಿ, ಕಲಬುರಗಿ ಬುದ್ಧವಿಹಾರದ ಸಂಘಾನಂದ ಬಂತೇಜಿ, ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯ ವಹಿಸುವರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಾ.ಅಜಯಸಿಂಗ್ ಅಧ್ಯಕ್ಷತೆ ವಹಿಸುವರು ಎಂದರು.
ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜ್ಯೋತಿ ಬೆಳಗಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಅಪ್ಪುಗೆರೆ ಸೋಮಶೇಖರ ಮುಖ್ಯ ಭಾಷಣ ಮಾಡುವರ ಎಂದು ತಿಳಿಸಿದರು.
ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೊಲ್ಲಾಳಪ್ಪ ಯಾತನೂರ, ಜಿ.ಪಂ ಮಾಜಿ ಸದಸ್ಯರಾದ ಶಾಂತಪ್ಪ ಕೂಡಲಗಿ, ಮರೆಪ್ಪ ಬಡಿಗೇರ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ, ಅಂಬೇಡ್ಕರ್ ಜಯಂತಿ ಸಮಿತಿ ಅಧ್ಯಕ್ಷ ರಾಯಪ್ಪ ಬಾರಿಗಿಡ, ಮುಖಂಡರಾದ ಸುಭಾಷ ಚನ್ನೂರ, ಯಶವಂತ ಆಂದೋಲಾ, ಪುಂಡಲೀಕ ಗಾಯಕವಾಡ, ಮಲ್ಲಣ್ಣ ಕೊಡಚಿ ಭಾಗವಹಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ಶಾಂತಪ್ಪ ಯಲಗೋಡ, ಸಿದ್ರಾಮ ಕಟ್ಟಿ, ಶ್ರೀಹರಿ ಕರಕಿಹಳ್ಳಿ, ಭಾಗರೆಡ್ಡಿ ಆಂದೋಲಾ, ಮಲ್ಲಿಕಾರ್ಜುನ ಕೆಲ್ಲೂರ, ಶ್ರೀಮಂತ ಧನಕರ್, ದವಲಪ್ಪ ಮದನ್, ರವಿ ಕುರಳಗೇರಾ, ಸಿದ್ದಪ್ಪ ಆಲೂರ, ಡಾ.ಅಶೋಕ ದೊಡಮನಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.