ಕಲಬುರ್ಗಿ: ಅಂಗನವಾಡಿಗಳಲ್ಲೇ ಎಲ್‌ಕೆಜಿ,ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ನೌಕರರು ನಡೆಸುತ್ತಿದ್ದ ಪಾದಯಾತ್ರೆಯನ್ನು ತುಮಕೂರಿನಲ್ಲಿ ತಡೆದಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಎಸ್ಎಫ್ಐ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿಗಳ ಕಚೇರಿಗೆ ಮೂರು ತಿಂಗಳ ಹಿಂದೆಯೇ ಈ ಸಂಬಂಧ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸುವುದನ್ನು ಬಿಟ್ಟು ಪ್ರತಿಭಟನೆ ನಡೆಸಲು ಅವಕಾಶ ನೀಡದಿರುವ ಕ್ರಮ ಪ್ರಜಾತಂತ್ರ ವಿರೋಧಿ ಎಂದು ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಟೀಕಿಸಿದರು.
ಗಂಗಮ್ಮ ಬಿರಾದಾರ, ಶಾಂತಪ್ಪ ಪಾಟೀಲ, ಸಿದ್ಧಲಿಂಗ ಪಾಳಾ, ವಿಶ್ವನಾಥ ರಾಗಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು. ತುಮಕೂರಿನಿಂದ ಬೆಂಗಳೂರಿನವರೆಗೆ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಪಾದಯಾತ್ರೆ ಹಮ್ಮಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.