ADVERTISEMENT

ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಅಂಗನವಾಡಿ ಕಾರ್ಯಕರ್ತೆ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 12:45 IST
Last Updated 18 ಜೂನ್ 2024, 12:45 IST
<div class="paragraphs"><p>ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಅಂಗನವಾಡಿ ಕಾರ್ಯಕರ್ತೆ</p></div>

ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಅಂಗನವಾಡಿ ಕಾರ್ಯಕರ್ತೆ

   

ಕಲಬುರಗಿ: 'ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳನ್ನು ಮುಚ್ಚುವ ಹುನ್ನಾರ ನಡೆದಿದೆ' ಎಂದು ಆರೋಪಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಬಿಸಿಲ ಝಳಕ್ಕೆ ಕುಸಿದು ಅಸ್ವಸ್ಥಗೊಂಡಿದ್ದಾರೆ.

ತಕ್ಷಣ ಅವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ಸೇರಿಸಲಾಗಿದೆ.

ADVERTISEMENT

ಸಿಐಟಿಯು ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಎರಡು ದಿನಗಳಿಂದ ನಗರದ ಜನಪ್ರತಿನಿಧಿಗಳ ಮನೆ ಎದುರು ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಬೆಳಿಗ್ಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ್ ಪಾಟೀಲ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರ ಮನೆ ಎದುರು ಸೇರಿ ಘೋಷಣೆ ಕೂಗುತ್ತಿದ್ದರು.

ಅಜಯ್ ಸಿಂಗ್ ಅವರ ಮನೆ ಎದುರು ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಲಬುರಗಿಯ ರಹಮತ್ ನಗರದ ಅಂಗನವಾಡಿ ಕಾರ್ಯಕರ್ತೆ ಜೈರುನ್ನೀಸಾ ಅವರು ಕುಸಿದರು. ಪಕ್ಕದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರು ಅವರನ್ನು ಉಪಚರಿಸಿ ಬಳಿಕ ಆಸ್ಪತ್ರೆಗೆ ಸೇರಿಸಿದರು.

‘ಜೈರುನ್ನೀಸಾ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪರಿಸ್ಥಿತಿ ಗಂಭೀರವಾಗಿದೆ. ತಮ್ಮ ಕೆಲಸ ಹೋಗಲಿದೆ ಎಂಬ ಆತಂಕವೂ ಅವರನ್ನು ಕಾಡಿದೆ’ ಎಂದು ಸಂಘಟನೆಯ ಮುಖಂಡ ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.