ADVERTISEMENT

‘ಮಾದಕ ವಸ್ತುಗಳ ಸೇವನೆ ಅಪರಾಧ’

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 4:44 IST
Last Updated 27 ಜೂನ್ 2024, 4:44 IST
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕ ವಿರೋಧಿ ದಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಉದ್ಘಾಟಿಸಿದರು
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕ ವಿರೋಧಿ ದಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಉದ್ಘಾಟಿಸಿದರು   

ಕಲಬುರಗಿ: ‘ಮಾದಕ ವಸ್ತುಗಳ ಸೇವೆನೆಯಿಂದ ಆರೋಗ್ಯದ ಮೇಲೆ ದುಷ್ಪಪರಿಣಾಮ ಬೀರುತ್ತದೆ. ಅಲ್ಲದೇ ಮಾದಕ ವಸ್ತುಗಳನ್ನು ಬೆಳೆಯುವುದು, ಸಾಗಣೆ ಮತ್ತು ಸಂಗ್ರಹ ಮಾಡುವುದು ಅಪರಾಧವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.

ನಗರದ ಜಿಮ್ಸ್ ಕಮುನಿಟಿ ಮೆಡಿಸಿನ್ ಹಾಲ್‍ನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಮ್ಸ್ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಈ ಹಿಂದೆ ಅಷ್ಟೊಂದು ಮಾದಕ ವಸ್ತುಗಳು ಸಿಗುತ್ತಿರಲಿಲ್ಲ. ಕಳ್ಳಭಟ್ಟಿ ಸಾರಾಯಿ ಸೇವನೆ ಮಾಡುತ್ತಿದ್ದರು. ಇದರಿಂದ ಅನೇಕ ಜನರ ಸಾವನ್ನಪ್ಪಿದ್ದಾರೆ. ಈಗ ಮಾದಕ ವಸ್ತುಗಳ ಹಾವಳಿ ಜಾಸ್ತಿಯಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಕಾನೂನುಗಳನ್ನು ತಂದರೂ ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಮನೋವೈದ್ಯ ಡಾ.ಮಹಮ್ಮದ್ ಇರಫಾನ್ ಮಹಾಗಾವಿ ಮಾತನಾಡಿ, ‘ಡ್ರಗ್ಸ್ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುತ್ತದೆ. ದೈಹಿಕ, ಮಾನಸಿಕ ಸಮಸ್ಯೆ ಸೇರಿದಂತೆ ಹಣಕಾಸು, ಸಾಮಾಜಿಕ ಸಮಸ್ಯೆಗೆ ಗುರಿಯಾಗುತ್ತಾರೆ’ ಎಂದು ಹೇಳಿದರು.

ಜಿಮ್ಸ್ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಪ್ರಭುಕಿರಣ ವಿ.ಗೋಗಿ, ಪ್ರಭಾರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವಿವೇಕಾನಂದ ರಡ್ಡಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.