ಕಲಬುರಗಿ: ಪ್ರಸಕ್ತ 2024-25ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರು, ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಕಚೇರಿ ವ್ಯಾಪ್ತಿಯಲ್ಲಿ ಬರುವ ಬೀದರ್, ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಮಾಜಿ ಸೈನಿಕರು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅವಶ್ಯಕ ದಾಖಲೆಗಳೊಂದಿಗೆ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಅಕ್ಟೋಬರ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೆ.ಎಸ್.ಬಿ. ಆನ್‍ಲೈನ್‍ನಲ್ಲಿ ಶಿಷ್ಯವೇತನದ ಅರ್ಜಿ ಸಲ್ಲಿಸಿರುವವರು ಈ ಶಿಷ್ಯವೇತನಕ್ಕೆ ಅರ್ಹರಿರುವುದಿಲ್ಲ ಎಂದು ಹೇಳಿದ್ದಾರೆ.
ಕಲಬುರಗಿ: ಪ್ರಸಕ್ತ 2024–25ನೇ ಸಾಲಿಗೆ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಕಲ್ಯಾಣ ನಿಧಿ ಮತ್ತು ವಿಶೇಷ ನಿಧಿಗಳಿಂದ ಶಿಷ್ಯವೇತನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ (ಅಧಿಕಾರಿಗಳನ್ನು ಹೊರತುಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಪದವಿ, ಡಿಪ್ಲೊಮಾ, ಜೆಒಸಿ/ಪ್ರೊಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಕಲ್ಯಾಣ ನಿಧಿ ಮತ್ತು ವಿಶೇಷ ನಿಧಿಗಳಿಂದ ಅನುದಾನ ಮಂಜೂರು ಮಾಡಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಕಚೇರಿ ವ್ಯಾಪ್ತಿಯಲ್ಲಿ ಬರುವ ಬೀದರ್, ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಮಾಜಿ ಸೈನಿಕರು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅವಶ್ಯಕ ದಾಖಲೆಗಳೊಂದಿಗೆ ಅಕ್ಟೋಬರ್ 31ರೊಳಗಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.