ADVERTISEMENT

ಸೇಡಂ | ವೈದ್ಯರ ಮೇಲೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 8:30 IST
Last Updated 24 ಜುಲೈ 2024, 8:30 IST
<div class="paragraphs"><p>ಸೇಡಂ ತಾಲ್ಲೂಕು ಆಸ್ಪತ್ರೆ ಮುಂಭಾಗದಲ್ಲಿ ಬುಧವಾರ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು</p></div>

ಸೇಡಂ ತಾಲ್ಲೂಕು ಆಸ್ಪತ್ರೆ ಮುಂಭಾಗದಲ್ಲಿ ಬುಧವಾರ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು

   

ಸೇಡಂ(ಕಲಬುರಗಿ ಜಿಲ್ಲೆ): ಪಟ್ಟಣದ ತಾಲ್ಲೂಕು ಆಸ್ಪತ್ರೆಯ ಡಾ.ಗೌತಮ ಶಿವರಾಯ ಅವರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಒಪಿಡಿ ಸ್ಥಗಿತಗೊಳಿಸಿ ಬುಧವಾರ ಪ್ರತಿಭಟನೆ ನಡೆಸಿದರು.

ಮಂಗಳವಾರ ರಾತ್ರಿ ಆಸ್ಪತ್ರೆಗೆ ಬಂದ ಸೇಡಂ ನಿವಾಸಿ ಶಿವ ಮತ್ತು ಪ್ರವೀಣ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ ಡಾ.ಗೌತಮ ಅವರು ಸೇಡಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ADVERTISEMENT

ಹಲ್ಲೆಯನ್ನು ಖಂಡಿಸಿ ವೈದ್ಯರು ಮತ್ತು ಸಿಬ್ಬಂದಿ ಆಸ್ಪತ್ರೆಯ ಒಪಿಡಿ ತೊರೆದು, ಕೈಗೆ‌ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಆಸ್ಪತ್ರೆಯ ವೈದ್ಯರ ‌ಮೇಲೆ ಹಲ್ಲೆ ಖಂಡನೀಯವಾಗಿದ್ದು, ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುತ್ತಿದ್ದೆ. ಶಿವು ಮತ್ತು ಪ್ರವೀಣ್ ಆಸ್ಪತ್ರೆಗೆ ಬಂದರು. ವೈದ್ಯರು ಬೇರೆ ರೋಗಿಗೆ ಚಿಕಿತ್ಸೆ ಕೊಡುತ್ತಿದ್ದಾರೆ, ಅಲ್ಲಿಯವರೆಗೆ ಕಾಯುವಂತೆ ಈ ಇಬ್ಬರಿಗೂ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದರು. ಆದರೆ, ಏಕಾಏಕಿ ಶಿವ ಮತ್ತು ಪ್ರವೀಣ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಗೌತಮ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಹಲ್ಲೆ ನಡೆಸುವ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ. ನನಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಲ್ಲೆ ನಡೆಸಿದ್ದು ಖಂಡನೀಯ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ ಮನ್ನೆ, ಡಾ.ಗೀತಾ ಶ್ರೀನಿವಾಸರೆಡ್ಡಿ ಪಾಟೀಲ, ಡಾ.ನಾಗನಾಥ, ಡಾ.ಸದಾಶಿವ, ಡಾ.ಗಾಯತ್ರಿ, ಡಾ.ಶಶಿಕಾಂತ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.