ADVERTISEMENT

ಬಾಬೂಜಿ ತತ್ವ, ಸಿದ್ಧಾಂತ ಅಳವಡಿಕೆ ಅವಶ್ಯ: ಆಶಪ್ಪ ಪೂಜಾರಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 14:02 IST
Last Updated 5 ಏಪ್ರಿಲ್ 2024, 14:02 IST
ಸೇಡಂ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಶುಕ್ರವಾರ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು
ಸೇಡಂ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಶುಕ್ರವಾರ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು    

ಸೇಡಂ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರು ಜೀವನದುದ್ದಕ್ಕೂ ಕಷ್ಟಗಳ ಮಧ್ಯೆಯೇ ಬೆಳೆದು ಪ್ರಬುದ್ಧ ಭಾರತ ನಿರ್ಮಾಣಕ್ಕೆ ಅಹರ್ನಿಶಿ ಶ್ರಮಿಸಿದರು. ಅವರ ತತ್ವ, ಸಿದ್ಧಾಂತ ಮತ್ತು ಬದ್ಧತೆಯ ಜೀವನ ಪ್ರತಿಯೊಬ್ಬರಿಗೂ ಪ್ರೇರಣಾದಾಯಕ’ ಎಂದು ಉಪವಿಭಾಗಾಧಿಕಾರಿ ಆಶಪ್ಪ ಪೂಜಾರಿ ಹೇಳಿದರು.

ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಎದುರು ಶುಕ್ರವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವದಲ್ಲಿ ಮಾತನಾಡಿದರು. ‘ಭಾರತ ಪ್ರಬುದ್ಧವಾಗಿ ಬೆಳೆಯಲು ಮಹಾನ್ ನಾಯಕರ ಕೊಡುಗೆ ಅಪಾರವಾಗಿದೆ’ ಎಂದರು.

ಮುಖಂಡ ಜೈಭೀಮ ಊಡಗಿ ಮಾತನಾಡಿ, ‘ಮಹಾನ್ ವ್ಯಕ್ತಿಗಳು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತರಲ್ಲ. ಅವರು ಪ್ರತಿಯೊಂದು ಸಮಾಜಕ್ಕೆ ಮತ್ತು ಮನುಕುಲಕ್ಕೆ ಮಾರ್ಗದರ್ಶಕರು. ಅವರ ಜಯಂತಿಗೆ ಎಲ್ಲಾ ಸಮಾಜದವರನ್ನು ಅಧಿಕಾರಿಗಳು ಆಹ್ವಾನಿಸಬೇಕು’ ಎಂದರು. ಮುಖಂಡ ದೇವಿಂದ್ರ ಹೆಗಡೆ ಮಾತನಾಡಿದರು.

ADVERTISEMENT

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಾನಂದ ಮೇತ್ರೆ, ಗ್ರೇಡ್-2 ತಹಶೀಲ್ದಾರ್ ಸಿದ್ರಾಮ ನಾಚವಾರ, ನಾಗನಾಥ ತೆರಗೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿಜಯಕುಮಾರ ಪುಲಾರಿ, ಸಹಾಯಕ ಕೃಷಿ ನಿರ್ದೇಶಕ ವೈ.ಎಲ್.ಹಂಪಣ್ಣ, ಮಾರುತಿ ನಾಯಕ, ಕ್ಷೇತ್ರಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ಪಾಟೀಲ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ ಇಮಡಾಪುರ, ಶಂಭುಲಿಂಗ ನಾಟೇಕಾರ, ರಾಜು ಕಾಳಗಿ, ಗೋಪಾಲ ಸೇಡಂಕರ್, ಶಿವಯೋಗಿ ಸಕ್ಪಾಲ್, ಶಿವರಾಯ ಭೋವಿ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.