ADVERTISEMENT

ಬಸವಣ್ಣನವರ ಕಾಯಕ ತತ್ವ ಪ್ರಗತಿಗೆ ಪೂರಕ

​ಪ್ರಜಾವಾಣಿ ವಾರ್ತೆ
Published 25 ಮೇ 2024, 16:07 IST
Last Updated 25 ಮೇ 2024, 16:07 IST
ಸೇಡಂ ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ನಡೆದ ಬಸವ ಜಯಂತಿಯನ್ನು ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು
ಸೇಡಂ ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ನಡೆದ ಬಸವ ಜಯಂತಿಯನ್ನು ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು   

ಸೇಡಂ: ‘ಬಸವಣ್ಣನವರು, 12ನೇ ಶತಮಾನದಲ್ಲಿ ಮನುಕುಲಕ್ಕೆ ನೀಡಿದ ಕಾಯಕ ತತ್ವವು, ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ’ ಎಂದು ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಹೇಳಿದರು.

ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ನಡೆದ ಬಸವ ಜಯಂತಿ ಉತ್ಸವದಲ್ಲಿ ಅವರು ಮಾತನಾಡಿದರು.

‘ನಾಡಿನಲ್ಲಿರುವ ಪ್ರತಿಯೊಬ್ಬರು ತಮಗಿಷ್ಟವಾದ ಕಾಯಕವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾಡಿದ್ದಲ್ಲಿ ನಾಡಿನ ಆರ್ಥಿಕ ಹೆಚ್ಚುತ್ತದೆ. ಪ್ರತಿಯೊಬ್ಬರೂ ಕಾಯಕ ಮಾಡುವುದರಿಂದ ನಿರುದ್ಯೋಗ ಸಮಸ್ಯೆಯೇ ಇರೋದಿಲ್ಲ. ಯಾರೂ ಸಹ ಹಸಿವಿನಿಂದ ಬಳಲುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಇದರಿಂದ ವಿವಿಧ ಕ್ಷೇತ್ರಗಳ ಪ್ರಗತಿ ತನ್ನಿಂದ ತಾನಾಗಿಯೇ ನಡೆಯುತ್ತದೆ’ ಎಂದು ಹೇಳಿದರು.

ADVERTISEMENT

ಜೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್‌ ಶಂಕರ ಗುತ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳಾದ ರಾಜು ಕುಲಕರ್ಣಿ, ಲಕ್ಷ್ಮಪ್ಪ ದೊಡ್ಡಮನಿ, ಸುರೇಶ ಬಾಬು, ವಿದ್ಯಾಸಾಗರ, ಸಂತೋಷ, ಮೋಹನ್ ರಾಠೋಡ, ಕಾಮಣ್ಣ, ಬನ್ನಪ್ಪ, ಶಿವಕುಮಾರ, ಗೌರಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.