ಕಲಬುರಗಿ: ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಬಿಜೆಪಿ ಮುಖಂಡ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅದ್ಯಕ್ಷ ಧರ್ಮಣ್ಣ ದೊಡ್ಡಮನಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ಕಲಬುರಗಿಯಿಂದ ಬೆಂಗಳೂರಿಗೆ ವಿಶೇಷ ಏರ್ ಆಂಬುಲೆನ್ಸ್ ಮೂಲಕ ಏರ್ ಲಿಫ್ಟ್ ಮಾಡಲಾಯಿತು.
ನಗರದ ಯುನೈಟೆಡ್ ಆಸ್ಪತ್ರೆಯಿಂದ ಗ್ರೀನ್ ಕಾರಿಡಾರ್ (ಜಿರೋ ಟ್ರಾಫಿಕ್) ವ್ಯವಸ್ಥೆ ಮಾಡಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಲಾಯಿತು. ಅಲ್ಲಿಂದ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಇಳಿದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.
ಹೈದರಾಬಾದ್‌ನಿಂದ ಬೆಳಿಗ್ಗೆ 9:25ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಏರ್ ಆಂಬುಲೆನ್ಸ್ ಬಂದಿಳಿಯುತು. ಅದರ ಬೆನ್ನಲ್ಲಿಯೇ ಅಗತ್ಯ ಸಿದ್ದತೆ ಮಾಡಿಕೊಂಡಿದ್ದ ವೈದ್ಯಕೀಯ ಸಿಬ್ಬಂದಿ ಯುನೈಟೆಡ್ ಆಸ್ಪತ್ರೆಯಿಂದ ಬೆಳಿಗ್ಗೆ 9: 40ಕ್ಕೆ ರೋಗಿಯನ್ನು ಜಿರೋ ಟ್ರಾಫಿಕ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಕರೆದೊಯ್ದರು.
ನಗರದ ಸಂಚಾರಿ ಪೊಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.