ADVERTISEMENT

ಬಿ.ಕೆ.ಹರಿಪ್ರಸಾದ್‌ರನ್ನು ಸಿಎಂ ಮಾಡಿ: ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 14:22 IST
Last Updated 30 ಜೂನ್ 2024, 14:22 IST
ಸತೀಶ್ ಗುತ್ತೇದಾರ
ಸತೀಶ್ ಗುತ್ತೇದಾರ   

ಕಲಬುರಗಿ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಬಿ.ಕೆ.ಹರಿಪ್ರಸಾದ್ ಅವರನ್ನು ಸಿಎಂ ಮಾಡುವ ಮೂಲಕ ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯಕ್ಕೆ ಅಂತ್ಯ ಹಾಡಬೇಕು’ ಎಂದು ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿ ಒತ್ತಾಯಿಸಿದೆ.

ಮುತ್ಸದ್ದಿ ರಾಜಕಾರಣಿ, ಹಿಂದುಳಿದ ವರ್ಗಗಳ ನಾಯಕ ಹಾಗೂ ಗಾಂಧಿ ಕುಟುಂಬಕ್ಕೆ ನಿಕಟವರ್ತಿಯಾದ ಬಿ.ಕೆ.ಹರಿಪ್ರಸಾದ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ನಾಯಕತ್ವ ಬದಲಾವಣೆ ಕೂಗಿಗೆ ಇತಿಶ್ರೀ ಹಾಡಬೇಕು ಎಂದು ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್ ವಿ.ಗುತ್ತೇದಾರ ಮತ್ತು ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕಡೇಚೂರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಹರಿಪ್ರಸಾದ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಈಗಾಗಲೇ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ 70 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈಡಿಗ ಸಮುದಾಯದ ಈ ಬೇಡಿಕೆಯನ್ನು ಹೈಕಮಾಂಡ್ ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಲು ಸಮಿತಿ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.