ADVERTISEMENT

ಇಎಸ್ಐ ಆಸ್ಪತ್ರೆಯನ್ನು ತಾಲ್ಲೂಕು ಆಸ್ಪತ್ರೆ ಮಾಡಲು ಕ್ರಮ: ಡಾ.ಎಂ.ಎ.ರಶೀದ್

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2024, 14:35 IST
Last Updated 19 ನವೆಂಬರ್ 2024, 14:35 IST
<div class="paragraphs"><p>&nbsp; ಡಾ.ಎಂ ಎ ರಶೀದ್</p></div>

  ಡಾ.ಎಂ ಎ ರಶೀದ್

   

ಶಹಾಬಾದ್: ‘ನಗರದ ಹೊರವಲಯದಲ್ಲಿರುವ ಇಎಸ್‌ಐ ಆಸ್ಪತ್ರೆಯನ್ನು ಶಹಾಬಾದ್ ತಾಲ್ಲೂಕು ಆಸ್ಪತ್ರೆಯನ್ನಾಗಿ ಮಾರ್ಪಡಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭರವಸೆ ನೀಡಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಎಂ.ಎ.ರಶೀದ್ ತಿಳಿಸಿದ್ದಾರೆ.

ಅವರು ಬೆಂಗಳೂರಿನಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ADVERTISEMENT

ಈ ಬಗ್ಗೆ ಪ್ರಜಾವಾಣಿಗೆ ಮಾಹಿತಿ ನೀಡಿದ ಅವರು ‘ಕೋವಿಡ್ 3ನೇ ಹಂತದ ನಿರ್ವಹಣೆಗೆ ₹12 ಕೋಟಿ ವೆಚ್ಚದಲ್ಲಿ ಇಎಸ್ಐ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲಾಗಿದ್ದು ತಾಲ್ಲೂಕು ಆಸ್ಪತ್ರೆಯನ್ನಾಗಿ ಮಾರ್ಪಡಿಸಲು ಕ್ರಮ ಕೈಗೊಳ್ಳಬೇಕು ಎನ್ನುವ ಮನವಿಗೆ ಸ್ಪಂದಿಸಿದ ಸಚಿವರು, ‘ಕೂಡಲೇ ರಾಜ್ಯ ವೈದ್ಯಕೀಯ ಇಲಾಖೆ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ, ವಿಮಾ ಆಸ್ಪತ್ರೆಯನ್ನು ಕಾರ್ಮಿಕ ಇಲಾಖೆಯಿಂದ ನಿಯಮಾನುಸಾರ ಸುಪರ್ದಿಗೆ ತೆಗೆದುಕೊಂಡು ತಾಲ್ಲೂಕ ಆಸ್ಪತ್ರೆಯಾಗಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ’ ಎಂದು ಹೇಳಿದರು.

ಜೆಪಿ ಸಿಮೆಂಟ್ ಕಾರ್ಖಾನೆ ಹಾಗೂ ಜಿಇ ಕಾರ್ಖಾನೆಗಳ ಕಾಲೊನಿಯಲ್ಲಿ ನಿವಾಸಿಗಳ ಸಂಖ್ಯೆ ಕಡಿಮೆಯಿದ್ದು ಸದ್ಯದ ಅಧಿಸೂಚಿತ ಪ್ರದೇಶವನ್ನು ಕೈಬಿಟ್ಟು ಈ ಎರಡೂ ಕಾಲೊನಿಗಳನ್ನು ನಗರಸಭೆ ವ್ಯಾಪ್ತಿಗೆ ಸೇರಿಸಿದರೆ ಈ ಭಾಗದ ಸ್ವಚ್ಚತೆ, ನೀರು ಸರಬರಾಜು, ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂದೂ ಮನವಿ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಂಕ್ ಖರ್ಗೆ ಅವರಿಗೂ ಮನವಿ ಸಲ್ಲಿಸಲಾಗಿದೆ. ಶಿವಾನಂದ ಪಾಟೀಲ, ಮಾಣಿಕಗೌಡ ಪಾಟೀಲ, ಹಾಶಂ ಖಾನ್, ಮೃತ್ಯುಂಜಯ ಸ್ವಾಮಿ, ಸೇರಿದಂತೆ ಹಲವರು ಇದ್ದರು’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.