ಕಲಬುರಗಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಕ್ಷೇತ್ರ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ನಡೆಯಲಿದ್ದು, ನ.23ರಂದು ಮತದಾನ ನಡೆಯಲಿದೆ. ಈ ವೇಳೆ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಾಗಿ ನ.22ರ ಬೆಳಿಗ್ಗೆಯಿಂದ 24ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಮಾರಾಟ ನಿಷೇಧಿಸಲಾಗಿದೆ. ಮದ್ಯ ಮಾರಾಟ, ಸಂಗ್ರಹ ಹಾಗೂ ಸಾಗಾಣಿಕೆ, ಬಾರ್‌ಗಳು, ಕ್ಲಬ್‌ಗಳು, ಬಾರ್ ರೆಸ್ಟೋರೆಂಟ್ ಮತ್ತು ಮದ್ಯದ ಡಿಪೊಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಾತ್ರೆ, ದನಗಳ ಸಂತೆ, ಉತ್ಸವ, ಉರುಸ್ ನಿಷೇಧ: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾ.ಪಂ ಕ್ಷೇತ್ರಗಳ ಉಪಚುನಾವಣೆ ಮತದಾನ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ನ. 23ರಂದು ಬೆಳಿಗ್ಗೆ 6ರಿಂದ ಮತದಾನ ಮುಕ್ತಾಯಗೊಳ್ಳುವವರೆಗೆ ಜಾತ್ರೆ, ದನಗಳ ಸಂತೆ, ಉತ್ಸವಗಳು ಮತ್ತು ಉರುಸ್ ಮುಂತಾದವುಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.