ADVERTISEMENT

ಪ್ರಧಾನಿ ಹುದ್ದೆಗೆ ಜಾತಿಯ ಲೇಪನ ಸಲ್ಲದು: ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2023, 16:33 IST
Last Updated 20 ಡಿಸೆಂಬರ್ 2023, 16:33 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ‘ಪ್ರಧಾನಿ, ಉಪಪ್ರಧಾನಿ ಯಾರಗಾಬೇಕು ಎಂಬ ವಿಚಾರದಲ್ಲಿ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಆ ಸಮುದಾಯದಲ್ಲಿನವರ (ಪರಿಶಿಷ್ಟ ಜಾತಿ) ದಕ್ಷತೆ ನೋಡುವುದಿಲ್ಲವಾ? ಅವರೂ ಸಮರ್ಥರಲ್ಲವಾ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳುವ ಮೂಲಕ ತಮ್ಮ ತಂದೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡರು.

ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವದ ಬಗ್ಗೆ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ನರೇಂದ್ರ ಮೋದಿ ಅವರಿಗೆ ಸ್ಥಾನಮಾನ ಕೊಡಬೇಕಾದರೆ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಕಳೆದ ಹತ್ತು ವರ್ಷಗಳಿಂದ ನೋಡುತ್ತಿದ್ದೇವೆ’ ಎಂದರು.

‘ನಮ್ಮ ಮುಂದೆ ಇರುವುದು ಆದಷ್ಟು ಹೆಚ್ಚು ಸಂಸದರನ್ನು ಗೆಲ್ಲಿಸಿ ಕಳುಹಿಸುವುದು. ಯಾರು ಪ್ರಧಾನಿ, ಉಪ ಪ್ರಧಾನಿ ಎಂಬ ಸವಾಲಿಲ್ಲ. ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ 200ರಿಂದ 250 ಸ್ಥಾನಗಳನ್ನು ಗೆಲಲ್ಲಿದೆ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದೇ ನಮ್ಮ ಮುಖ್ಯ ಗುರಿ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.