ಕಲಬುರಗಿ: ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನಗರಾಭಿವೃದ್ಧಿ ಬೈರತಿ ಸುರೇಶ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್. ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಯದೇವ ಗುತ್ತೇದಾರ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಈಶಾನ್ಯ ವಲಯ ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.
ನಂತರ ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸೇವಾದಳ ಸೇರಿದಂತೆ 24 ವಿವಿಧ ತುಕಡಿಗಳ ಪಥಸಂಚಲನವನ್ನು ವೀಕ್ಷಿಸಿದರು.
ಇದಕ್ಕೂ ಮುನ್ನ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.