ADVERTISEMENT

ಕಲಬುರ್ಗಿ: ಬಸ್ ಸಂಚಾರ ಸಂಪೂರ್ಣ ಸ್ಥಗಿತ, ಮನೆಗೆ ಮರಳುವ ಧಾವಂತ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 5:43 IST
Last Updated 28 ಏಪ್ರಿಲ್ 2021, 5:43 IST
ಕಲಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಭಣಗುಡುತ್ತಿದೆ.
ಕಲಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಭಣಗುಡುತ್ತಿದೆ.   

ಕಲಬುರ್ಗಿ: ಜಿಲ್ಲಾಡಳಿತ 14 ದಿನಗಳ ಕಠಿಣ ಲಾಕ್ ಡೌನ್ ವಿಧಿಸಿದ್ದರಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಭಣಗುಡುತ್ತಿದೆ.

ಬೆಳಿಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದರಿಂದ ಮಾರುಕಟ್ಟೆಗೆ ಭೇಟಿ ನೀಡಿದ ಜನರು ತರಕಾರಿ, ಕಿರಾಣಿ ಸಾಮಗ್ರಿಗಳನ್ನು ಖರೀದಿಸಿ ಮನೆಗೆ ತೆರಳುವ ಧಾವಂತ ಕಂಡು ಬಂತು. 10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳ ಬಳಿ ತೆರಳಿ ಮುಚ್ಚುವಂತೆ ‌ಸೂಚನೆ ನೀಡಿದರು.

ಹೋಟೆಲ್‌ಗಳಲ್ಲಿ ಪಾರ್ಸೆಲ್ ಕೊಂಡೊಯ್ಯಲು ಅವಕಾಶ ನೀಡಲಾಗಿತ್ತು.

ADVERTISEMENT

ನಗರದ ಎಸ್ ವಿ ಪಿ ವೃತ್ತ, ಜಗತ್, ಸೂಪರ್ ಮಾರ್ಕೆಟ್, ಬಸ್ ನಿಲ್ದಾಣದ ‌ಬಳಿ ಗಸ್ತು ತಿರುಗುತ್ತಿರುವ ಪೊಲೀಸರು ಜನರನ್ನು ತಡೆದು ಪ್ರಶ್ನಿಸುತ್ತಿದ್ದಾರೆ. ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪೊಲೀಸರು ನಾಕಾ ಬಂದಿ ಮಾಡಿ ವಾಹನಗಳ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.

ಕಲಬುರ್ಗಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪೊಲೀಸರು ನಾಕಾ ಬಂದಿ ಮಾಡಿ ವಾಹನಗಳ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.