ADVERTISEMENT

ಬೆಳೆ ವಿಮಾ ನೋಂದಣಿಗೆ ಜುಲೈ 31 ಕೊನೆ ದಿನ: ಸಂಜೀವಕುಮಾರ ಮಾನಕರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 15:40 IST
Last Updated 2 ಜುಲೈ 2024, 15:40 IST
ಸಂಜೀವಕುಮಾರ ಮಾನಕರ
ಸಂಜೀವಕುಮಾರ ಮಾನಕರ   

ಚಿತ್ತಾಪುರ: 2024–25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಹೆಸರು ಬೆಳೆಗೆ ಜು 15 ಹಾಗೂ ಉದ್ದು, ತೊಗರಿ ಮತ್ತು ಇತರೆ ಬೆಳೆಗಳಿಗೆ ರೈತರು ವಿನಾ ನೋಂದಣಿ ಮಾಡಿಸಲು ಜುಲೈ 31 ಕೊನೆ ದಿನವಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ವಿಮಾ ಯೋಜನೆಯಡಿ ರೈತರು ತಮ್ಮ ಪಾಲಿನ ಕಂತು ಪ್ರತಿ ಎಕರೆಗೆ ಹೆಸರು-₹293.31 ವಿಮಾ ಕಂತು ಜುಲೈ 15ರೊಳಗೆ ಪಾವತಿಸಬೇಕು. ಉದ್ದು ₹264.11, ತೊಗರಿ ₹388.51, ಸೋಯಾಬಿನ್ ₹1,006.69, ಹತ್ತಿ ₹1,303 ವಿಮಾ ಕಂತು ಪಾವತಿಗೆ ಜುಲೈ 31 ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ವಿಮಾ ಯೋಜನೆ ಅನುಷ್ಠಾನಗೊಳಿಸಲು IFFCO TOKIO General Insurance Co.Ltd ಕಂಪನಿಯನ್ನು ನಿಗದಿಪಡಿಸಲಾಗಿದೆ. ರೈತರು ಹೆಚ್ಚಿನ ಮಾಹಿತಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ನೋಂದಣಿಗಾಗಿ ಹತ್ತಿರದ ಬ್ಯಾಂಕ್‌ಗಳಿಗೆ, ನಾಗರಿಕ ಸೇವಾ ಕೇಂದ್ರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಬಹದು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.