ADVERTISEMENT

ಸಿಯುಕೆ: ಹಾಸ್ಟೆಲ್ ಕಟ್ಟಡ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2024, 15:53 IST
Last Updated 21 ಸೆಪ್ಟೆಂಬರ್ 2024, 15:53 IST
ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ವಸತಿ ನಿಲಯಗಳ ಕಟ್ಟಡಗಳನ್ನು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಉದ್ಘಾಟಿಸಿದರು
ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ವಸತಿ ನಿಲಯಗಳ ಕಟ್ಟಡಗಳನ್ನು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಉದ್ಘಾಟಿಸಿದರು   

ಕಲಬುರಗಿ: ‘ಸಿಯುಕೆ ಈಗ ಸಂಪೂರ್ಣವಾಗಿ ವಸತಿ ಸಹಿತ ಕ್ಯಾಂಪಸ್ ಆಗಿದೆ. ಈಗ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ನೀಡಬಹುದು’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಎರಡು ಹಾಸ್ಟೆಲ್‌ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಎರಡೂ ಹಾಸ್ಟೆಲ್‌ಗಳು 1080 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವ ಸಾಮರ್ಥ್ಯ ಹೊಂದಿವೆ. ಈಗ ನಾವು ಕ್ಯಾಂಪಸ್‌ನಲ್ಲಿ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡಬಹುದು. ಸ್ಥಳೀಯ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನೀಡಬಹುದು ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ಗ್ರಂಥಾಲಯ, ಲ್ಯಾಬ್ ಮತ್ತು ಇತರ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು. ಮುಂದಿನ ಎರಡು ವರ್ಷಗಳಲ್ಲಿ ಇನ್ನೂ ನಾಲ್ಕು ಹಾಸ್ಟೆಲ್‌ಗಳ ನಿರ್ಮಾಣ, ನಾಲ್ಕರಿಂದ ಐದು ಹೊಸ ವಿಭಾಗಗಳನ್ನು ಪ್ರಾರಂಭಿಸುವುದು ಮತ್ತು ಎಲ್ಲಾ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ದ್ವಿಗುಣಗೊಳಿಸುವುದು ಗುರಿಯಾಗಿದೆ ಎಂದರು.

ಕುಲಸಚಿವ ಪ್ರೊ. ಆರ್.ಆರ್‌.ಬಿರಾದಾರ, ಮುಖ್ಯ ಎಂಜಿನಿಯರ್ ಐ.ಎಸ್.ಮಹಾಗಾಂವಕರ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಬಸವರಾಜ ಕುಬಕಡ್ಡಿ, ಮುಖ್ಯ ವಾರ್ಡನ್ ಬಸವರಾಜ ಎಂ.ಎಸ್., ಸಿಪಿಡಬ್ಲ್ಯೂಡಿ ಎಂಜಿನಿಯರ್ ವಿಕ್ರಮ ಶರ್ಮಾ, ಪ್ರೊ. ಚನ್ನವೀರ ಆರ್.ಎಂ., ಪ್ರೊ. ಬಸವರಾಜ ಡೋಣೂರ, ಪ್ರೊ. ಆರ್.ಎಸ್.ಹೆಗಡಿ, ಪ್ರೊ. ಜಿ.ಆರ್. ಅಂಗಡಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.