ಕಲಬುರ್ಗಿ: ಮೊಬೈಲ್ ಕಳ್ಳತನದ ಆರೋಪದ ಕುರಿತು ವಿಚಾರಣೆ ನಡೆಸಲು ಯುವಕನೊಬ್ಬನನ್ನು ನಗರದ ಪೊಲೀಸ್ ಠಾಣೆಯೊಂದಕ್ಕೆ ಕರೆತಂದಿದ್ದ ಪೊಲೀಸರು ಆತನನ್ನು ಥಳಿಸಿದ ಪರಿಣಾಮ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
‘ಮಧ್ಹಾಹ್ನದ ಸಮಯದಲ್ಲಿ ಆರೋಪಿಯನ್ನು ಕರೆತಂದಿದ್ದ ಪೊಲೀಸರು ಠಾಣೆಯ ಹಿಂದಿನ ಕೊಠಡಿಯಲ್ಲಿ ಆತನನ್ನು ಮನಬಂದಂತೆ ಥಳಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡ ಆತನನ್ನು ನಗರದ ಸೇಡಂ ರಸ್ತೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ’ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ‘ಪ್ರಜಾವಾಣಿ’ಗೆ ಸ್ಪಷ್ಟನೆ ನೀಡಿದ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್, ‘ಠಾಣೆಯಲ್ಲಿ ವಿಚಾರಣೆಗೆ ಕರೆತಂದಿದ್ದ ವೇಳೆ ಆತನಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತು. ಹೀಗಾಗಿ ನಮ್ಮ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಏನಾಗಿದೆ ಎಂಬುದರ ಮಾಹಿತಿ ಪಡೆಯುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.