ಕಲಬುರಗಿ: ತಾಲ್ಲೂಕಿನ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಯೋಜನಾ ಕಚೇರಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ ಮಾಡಲಾಯಿತು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ಮಾಲತಿ ರೇಷ್ಮಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಹಿಂದುಳಿದ ಗ್ರಾಮಗಳ ಅಭಿವೃದ್ಧಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ‘ ಎಂದರು.
ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ ಸುವರ್ಣ ಮಾತನಾಡಿ, ‘ಜಿಲ್ಲೆಯಲ್ಲಿ ಕೆರೆ ನಿರ್ಮಾಣ, ಶುದ್ಧ ಗಂಗಾ ಘಟಕ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನಗಳ ಜೀರ್ಣೋದ್ಧಾರ, ಕೃಷಿ ಪ್ರೇರಕ ಕಾರ್ಯಕ್ರಮ, ವಿಮೆ ಕಾರ್ಯಕ್ರಮ, ಮಹಿಳೆಯರಿಗೆ ಆರ್ಥಿಕ ಕಾನೂನು ನೆರವು ನೀಡುವ ಮೂಲಕ ಸ್ವಾಬಲಂಬನೆ ಜೀವನ ನಡೆಸುವಂತೆ ಪ್ರೇರೇಪಿಸಿದೆ‘ ಎಂದರು.
ಕಮಲಾಪುರ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಕಲ್ಲನಗೌಡ್. ಎಸ್, ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಪಾಟೀಲ, ಶಾಲೆಯ ಶಿಕ್ಷಕರಾದ ಗೌಡಿಶ ಬಿರಾದಾರ ಮತ್ತು ಶಾಲೆಯ ಮಕ್ಕಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.