ADVERTISEMENT

ಗಡಿಕೇಶ್ವಾರದಲ್ಲಿ ಮತ್ತೆ ಲಘು ಭೂಕಂಪನ, ಭೂಮಿಯಿಂದ ಭಾರಿ ಸದ್ದು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 5:18 IST
Last Updated 28 ಅಕ್ಟೋಬರ್ 2021, 5:18 IST
ಕಲಬುರಗಿ ಜಿಲ್ಲೆಯ ಗಡಿಕೇಶ್ವರ ಗ್ರಾಮದ ಗ್ರಾಮಸ್ಥರ ಚಿತ್ರ
ಕಲಬುರಗಿ ಜಿಲ್ಲೆಯ ಗಡಿಕೇಶ್ವರ ಗ್ರಾಮದ ಗ್ರಾಮಸ್ಥರ ಚಿತ್ರ   

ಚಿಂಚೋಳಿ: ತಾಲ್ಲೂಕಿನ ಗಡಿಕೇಶ್ವಾರ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಮತ್ತೆ ಭೂಮಿಯಿಂದ ಭಾರಿ ಸದ್ದು ಕೇಳಿ ಬಂದು ಲಘು ಕಂಪನ‌ ಸಂಭವಿಸಿದೆ ಎಂದು ಗ್ರಾಮದ ಮುಖಂಡರಾದ ಪ್ರಕಾಶ ರಂಗನೂರ ಮತ್ತು ಅರುಣ ರಂಗನೂರ ತಿಳಿಸಿದ್ದಾರೆ.

ಬೆಳಿಗ್ಗೆ 9.51ಕ್ಕೆ ಭೂಮಿಯಿಂದ ಸದ್ದು ಕೇಳಿ ಬಂದಿದೆ. ಇಲ್ಲಿ ನಿತ್ಯ ಲಘು ಕಂಪನ ಸಂಭವಿಸುತ್ತಿದೆ ಇದರ ಅಧ್ಯಯನಕ್ಕಾಗಿ ಹೈದರಾಬಾದ್‌ನಲ್ಲಿ ರಾಷ್ಟ್ರೀಯ ಭೂಭೌತವಿಜ್ಞಾನ ಸಂಶೋಧನಾ ಸಂಸ್ಥೆ ಸಿಸ್ಮೊ ಮೀಟರ್ ಅಳವಡಿಸಿದೆ. ಕಂದಾಯ ಸಚಿವ ಆರ್ ಅಶೋಕ ಭೇಟಿ ನೀಡಿದ ನಂತರ ಒಂದೆರಡು ದಿನ ಸದ್ದಿನ ಅನುಭವ ತಗ್ಗಿತ್ತು ಆದರೆ ಈಗ ಮತ್ತೆ ಮುಂದುವರೆದಿದ್ದು ಗ್ರಾಮಸ್ಥರನ್ನು ಕಂಗಾಲಾಗಿಸಿದೆ.

ಗಡಿಕೇಶ್ವಾರ, ಕುಪನೂರ ಬೆನಕನಳ್ಳಿ, ಭಂಟನಳ್ಳಿ ಹಾಗೂ ಕಾಳಗಿ ತಾಲ್ಲೂಕಿನ ಹಲಚೇರಾ, ಹೊಸಳ್ಳಿ, ಕೊರವಿ, ತೇಗಲತಿಪ್ಪಿ ಗ್ರಾಮಗಳಲ್ಲಿಯೂ ಭೂಮಿಯಿಂದ ಸದ್ದು ಕೇಳಿ ಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.