ಚಿತ್ತಾಪುರ: ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ರಾಜ್, ಐಟಿಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಹಾಗೂ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ಸಂಜಯ ಬುಳಕರ್ ಅವರು ಗುರುವಾರ ಬಸವೇಶ್ವರ ಆಸ್ಪತ್ರೆಯಲ್ಲಿ ನೇತ್ರದಾನ ಮಾಡುವ ವಾಗ್ದಾನ ಮಾಡಿದರು.
ಆಸ್ಪತ್ರೆಯಲ್ಲಿ ನೇತ್ರದಾನದ ಅರ್ಜಿ ಭರ್ತಿ ಮಾಡಿ ಆಸ್ಪತ್ರೆಯ ಸಿಬ್ಬಂದಿಗೆ ನೇತ್ರದಾನ ಮಾಡಿರುವ ಅಧಿಕೃತ ಪತ್ರ ನೀಡಿದ ಅವರು, ಭವಿಷ್ಯದಲ್ಲಿ ಅಂಧರ ಬಾಳಿಗೆ ಬೆಳಕಾಗಲಿ ಎಂದು ಸಚಿವರ ಹುಟ್ಟು ಹಬ್ಬದ ಕೊಡುಗೆಯಾಗಿ ನೇತ್ರದಾನ ಮಾಡುವ ವಾಗ್ದಾನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.