ADVERTISEMENT

ಕನಕಪುರ: ಸಾಲಬಾಧೆಗೆ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2023, 15:40 IST
Last Updated 10 ಸೆಪ್ಟೆಂಬರ್ 2023, 15:40 IST
ಮಲ್ಲೇಶಪ್ಪ 
ಮಲ್ಲೇಶಪ್ಪ    

ಚಿಂಚೋಳಿ: ತಾಲ್ಲೂಕಿನ ಕನಕಪುರ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ಮಲ್ಲೇಶಪ್ಪ ಕಲ್ಲಪ್ಪ(65) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಅತಿವೃಷ್ಟಿ ಅನಾವೃಷ್ಟಿಯಿಂದ ಮುಂಗಾರು ಏರುಪೇರಾಗಿದ್ದು, ಬೆಳೆ ಕೈಕೊಟ್ಟಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ’ ಎಂದು ಗ್ರಾಮದ ಹಣಮಂತರಾವ್ ದೇಶಪಾಂಡೆ ತಿಳಿಸಿದ್ದಾರೆ.

ಚಿಂಚೋಳಿ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪುತ್ರ ಕಲ್ಲಪ್ಪ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೆಜಿಬಿ ಹಾಗೂ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಖಾಸಗಿ ಸಾಲ ಹೊಂದಿದ್ದರು ಎಂದು ತಿಳಿದುಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.