ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ನಿವಾಸಿ ಸಿದ್ದಪ್ಪ ಗುಂಡಪ್ಪ ಕರಗಾರ್ (35) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ₹ 3 ಲಕ್ಷ ಸಾಲ ಹೊಂದಿದ್ದು, ಖಾಸಗಿಯವರ ಬಳಿ ₹ 2 ಲಕ್ಷ ಸಾಲ ಪಡೆದಿದ್ದರು ಎಂದು ಪತ್ನಿ ಶಿಲ್ಪಾ ತಿಳಿಸಿದ್ದಾರೆ.
ಅವರಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ರಟಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.