ರಾಜ್ಯ ಸರ್ಕಾರವು ವಕ್ಫ್ ಮಂಡಳಿಯ ಹೆಸರಿನಲ್ಲಿ ರೈತರ ಜಮೀನು, ಮಠ–ಮಂದಿರಗಳ ಆಸ್ತಿ , ಸರ್ಕಾರದ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ನೇಗಿಲ ಯೋಗಿ ಸ್ವಾಭಿಮಾನಿ ವೇದಿಕೆ ವತಿಯಿಂದ ವಕ್ಫ್ ಹಠಾವೊ, ಅನ್ನದಾತ ಬಚಾವೊ ಬೃಹತ್ ಪ್ರತಿಭಟನಾ ಮೆರವಣಿಗೆ ಗುರುವಾರ ನಡೆಯಿತು. ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಆವರಣದಲ್ಲಿ ನೂರಾರು ಮಠಾಧೀಶರು, ರೈತ ಮುಖಂಡರು, ರೈತರು, ಬಿಜೆಪಿ ಕಾರ್ಯಕರ್ತರು, ಸಂಘ-ಸಂಸ್ಥೆಗಳ ಮುಖಂಡರು ಜಮಾಯಿಸಿದರು. ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್, ವಕ್ಫ್ ಮಂಡಳಿ ವಿರುದ್ಧ ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.