ADVERTISEMENT

ಬಾಲಕಿ ಆತ್ಮಹತ್ಯೆ: ವಾರ್ಡನ್ ವಿರುದ್ಧ ಎಫ್ಐಆರ್

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 15:00 IST
Last Updated 10 ಮಾರ್ಚ್ 2024, 15:00 IST

ಚಿತ್ತಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಕರದಾಳ ಗ್ರಾಮದ ವಸತಿ ನಿಲಯದಲ್ಲಿ ಭಾಗ್ಯಶ್ರೀ ಸಾಯಬಣ್ಣಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ನಿಲಯದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವಾರ್ಡನ್ ರೇಣುಕಾ ಮೂಲಿಮಠ, ಅಧೀಕ್ಷಕ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಎಫ್‌ಐಆರ್ ದಾಖಲಾದ ಬೆನ್ನಲ್ಲೇ ವಸತಿ ನಿಲಯದ ವಾರ್ಡನ್ ರೇಣುಕಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ವಸತಿ ನಿಲಯದ ವಾರ್ಡನ್ ನಿರ್ಲಕ್ಷ್ಯವೇ ಕಾರಣ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪ ಮಾಡಿದ್ದರು.

ADVERTISEMENT

ಹೀಗಾಗಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.