ADVERTISEMENT

ಕಲಬುರಗಿ: ಸಿಯುಕೆ ಕುಲಪತಿ, ಕುಲಸಚಿವರ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 23:22 IST
Last Updated 2 ಆಗಸ್ಟ್ 2024, 23:22 IST
   

ಕಲಬುರಗಿ: ಸಂಶೋಧನಾ ವಿದ್ಯಾರ್ಥಿಯೊಬ್ಬರಿಗೆ ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ವಿಶ್ವವಿದ್ಯಾಲಯಕ್ಕೆ ಬರುವ ವೇಳೆ ಗೇಟಿನಲ್ಲೇ ತಡೆದು ಜಾತಿ ನಿಂದಿಸಿದ್ದಾರೆ ಎಂಬ ಆರೋಪದಡಿ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು, ಭದ್ರತಾ ಅಧಿಕಾರಿ ವಿರುದ್ಧ ನರೋಣಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕನ್ನಡ ವಿಭಾಗದಲ್ಲಿ ಸಂಶೋಧನೆ ಮಾಡಿರುವ ನಂದಪ್ಪ ‍ಪರಮಣ್ಣ (30) ದೂರು ದಾಖಲಿಸಿದವರು.

ಪಿಎಚ್‌.ಡಿ. ಸಂಶೋಧನಾ ವಿದ್ಯಾರ್ಥಿಯಾಗಿದ್ದ ನಂದಪ್ಪ ಅವರಿಗೆ ವಿಭಾಗದ ವತಿಯಿಂದ ಗುರುವಾರ ಬೀಳ್ಕೊಡುಗೆ ಏರ್ಪಡಿಸಲಾಗಿತ್ತು. ಅದಕ್ಕಾಗಿ ವಿ.ವಿ.ಗೆ ಬಂದಾಗ ಅವರನ್ನು ಮುಖ್ಯ ದ್ವಾರದಲ್ಲಿಯೇ ತಡೆಯಲಾಯಿತು. ಏಕೆ ಎಂದು ಕೇಳಿದಾಗ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ ಅವರ ನಿರ್ದೇಶನದ ಮೇರೆಗೆ ಒಳಗೆ ಬಿಡುತ್ತಿಲ್ಲ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

‘ಹಿಂದೆಯೂ ನಾನು ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕಾಗಿ ಈ ಬಗೆಯ ಕಿರುಕುಳವನ್ನು ನೀಡಿದ್ದಾರೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.