ಕಲಬುರಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ(ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ರವೀಂದ್ರ ಕರಲಿಂಗಣ್ಣವರ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ರಾಹುಲ್ ಪಾಂಡ್ವೆ ಅವರ ವರ್ಗಾವಣೆಯಿಂದಾಗಿ ಕಳೆದ ಒಂದು ತಿಂಗಳಿಂದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿಯಿತ್ತು. ಈಗ, ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ (ಭೂಮಿ ಉಸ್ತುವಾರಿ, ಯೋಜನೆ ಮತ್ತು ಇತರೆ) ರವೀಂದ್ರ ಅವರು ನಿಯೋಜನೆಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.