ADVERTISEMENT

ನಾರಾಯಣಸ್ವಾಮಿಗೆ ವಿಪಕ್ಷ ನಾಯಕ ಸ್ಥಾನ ನೀಡಿ: ಅಂಬಾರಾಯ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 15:51 IST
Last Updated 27 ಜೂನ್ 2024, 15:51 IST

ಕಲಬುರಗಿ: ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಮಾಜಿ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಅವರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಖಾಲಿಯಾಗಿರುವ ವಿಪಕ್ಷ ನಾಯಕನ ಸ್ಥಾನಕ್ಕೆ ಎಸ್‌ಸಿ ಬಲಗೈ ಸಮುದಾಯದ ನಾರಾಯಣಸ್ವಾಮಿ ಅವರನ್ನು ಪರಿಗಣಿಸಬೇಕು. ಅವರು ಅನುಭವಿ ರಾಜಕಾರಣಿ ಹಾಗೂ ಉತ್ತಮ ವಾಗ್ಮಿಯಾಗಿದ್ದು, ಆಯ್ಕೆಯಿಂದ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದರು.

ಗುರುರಾಜ ನರಿಬೋಳ, ಮರೆಪ್ಪ ಬಡಿಗೇರ, ಧರ್ಮಣ್ಣ ಇಟಗಾ, ಬಸವರಾಜ ಬೆಣ್ಣೂರ, ಜೈಭೀಮ ಹೆರೂರ, ಗಣೇಶ ವಳಕೇರಿ ಮತ್ತಿತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.