ಕಲಬುರಗಿ: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳಿಗೆ ಈಗಾಗಲೇ ಆಗಸ್ಟ್ ತಿಂಗಳ ಸಹಾಯಧನವನ್ನು ಪಾವತಿಸಲಾಗಿದೆ. ಆದರೆ, ಜಿಲ್ಲೆಯಲ್ಲಿ ನೋಂದಾಯಿಸಿರುವ 4.95 ಲಕ್ಷ ಫಲಾನುಭವಿಗಳ ಪೈಕಿ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗದ 20,881 ಫಲಾನುಭವಿಗಳು ಹಾಗೂ ಇ–ಕೆವೈಸಿ ಅಪ್‌ಡೇಟ್ ಆಗದ 46,612 ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2 ಸಾವಿರ ಸಹಾಯಧನ ಪಾವತಿಯಾಗಿಲ್ಲ.
ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ–ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ–ಕೆವೈಸಿ ಅಪ್‌ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.