ADVERTISEMENT

ಹನಿಟ್ರ್ಯಾಪ್‌ ಪ್ರಕರಣ: ವ್ಯಾಪಾರಿಯಿಂದ ಸುಲಿಗೆ ಮಾಡಿದ್ದ ₹3.95 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 5:24 IST
Last Updated 24 ಅಕ್ಟೋಬರ್ 2024, 5:24 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಕಲಬುರಗಿ: ವ್ಯಾಪಾರಿಯಬ್ಬರನ್ನು ಹನಿಟ್ರ್ಯಾಪ್‌ ಜಾಲದಲ್ಲಿ ಸಿಲುಕಿಸಿ, ಆತನಿಂದ ₹34.25 ಲಕ್ಷ ಸುಲಿಗೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಯ ಮನೆಯಲ್ಲಿ ಶೋಧ ಕಾರ್ಯ ನಡೆಸಿ, ಹಣ ಸೇರಿದಂತೆ ನಾನಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ₹34.25 ಲಕ್ಷ ಸುಲಿಗೆ ಮಾಡಿದ ಆರೋಪದಡಿ ಬಳೆ ಮಾರಾಟ ಮಳಿಗೆಯ ವ್ಯಾಪಾರಿಯೊಬ್ಬರು ಮಹಾರಾಷ್ಟ್ರ ಮೂಲದ ಯುವತಿ ಸೇರಿ ಒಂಬತ್ತು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ತನಿಖೆ ಚುರುಕುಗೊಂಡಿದೆ.

ADVERTISEMENT

ಪ್ರಕರಣದ ಪ್ರಮುಖ ಆರೋಪಿಯಾದ ರಾಜು ಲೇಂಗಟಿಯನ್ನು ಮಂಗಳವಾರ ವಶಕ್ಕೆ ಪಡೆಯಲಾಗಿತ್ತು. ಹನಿಟ್ರ್ಯಾಪ್‌ ಮೂಲಕ ವ್ಯಾಪಾರಿಯಿಂದ ಸುಲಿಗೆ ಮಾಡಿದ್ದ ಹಣದ ಪೈಕಿ ₹ 2.50 ಲಕ್ಷ ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಹನಿಟ್ರ್ಯಾಪ್ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಕರಣದ ಮೊದಲ ಆರೋಪಿ ಪ್ರಭುಲಿಂಗ ಹಿರೇಮಠ ಮನೆಯನ್ನು ನ್ಯಾಯಾಲಯದ ನಿರ್ದೇಶನದ ಮೇರೆಗೆ ಶೋಧ ಮಾಡಲಾಗಿದೆ. ಶೋಧ ಕಾರ್ಯದಲ್ಲಿ ₹1.46 ಲಕ್ಷ ನಗದು, 55 ಗ್ರಾಂ. ಚಿನ್ನ ಹಾಗೂ ಒಂದು ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳ ಮನೆಯಿಂದ ಒಟ್ಟು ₹3.96 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.