ADVERTISEMENT

ಖರ್ಗೆ ಕುಟುಂಬದ ವಿರುದ್ಧ ಮಾತು ನಿಲ್ಲಿಸಿದರೆ ನಿಗಮ– ಮಂಡಳಿ ಸ್ಥಾನ: ಮಣಿಕಂಠ ರಾಠೋಡ

ಖರ್ಗೆ ಕುಟುಂಬದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಿ ಕಾಂಗ್ರೆಸ್‌ಗೆ ಸೇರ್ಪಡೆಯಾದರೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವುದಾಗಿ ಆಮಿಷ: ಮಣಿಕಂಠ ರಾಠೋಡ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2023, 13:55 IST
Last Updated 9 ಡಿಸೆಂಬರ್ 2023, 13:55 IST
<div class="paragraphs"><p>ಮಣಿಕಂಠ ರಾಠೋಡ</p></div>

ಮಣಿಕಂಠ ರಾಠೋಡ

   

ಕಲಬುರಗಿ: ‘ಖರ್ಗೆ ಕುಟುಂಬದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಿ ಕಾಂಗ್ರೆಸ್‌ಗೆ ಸೇರ್ಪಡೆಯಾದರೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಮುಖಂಡ ಬಾಬುರಾವ್ ಚಿಂಚನಸೂರ್ ಅವರ ಮೂಲಕ ನಮ್ಮ ತಂದೆಗೆ ಫೋನ್‌ ಕರೆ ಮಾಡೆ ನನಗೆ ಆಮಿಷ ಒಡ್ಡಲಾಗಿತ್ತು’ ಎಂದು ಮಣಿಕಂಠ ರಾಠೋಡ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಕಂಠ, ‘ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರು ಬಾಬುರಾವ ಚಿಂಚನಸೂರ ಮುಖಾಂತರ ಪಕ್ಷಕ್ಕೆ ಬರುವಂತೆ ಆಮಂತ್ರಿಸಿದ್ದಾರೆ’ ಎಂದಿದ್ದಾರೆ. ತಮ್ಮ ತಂದೆ ಜತೆಗೆ ಚಿಂಚನಸೂರ ಅವರು ಮಾತನಾಡಿದ್ದರು ಎನ್ನಲಾದ 20 ಸೆಕೆಂಡ್‌ಗಳ ಫೋನ್‌ ಕಾಲ್ ಸಂಭಾಷಣೆಯನ್ನು ಹಂಚಿಕೊಂಡಿದ್ದಾರೆ.

ADVERTISEMENT

‘ಪ್ರಿಯಾಂಕ್ ಖರ್ಗೆ ಹಾಗೂ ಅವರ ಹಿಂಬಾಲಕರು ಮರಳು ದಂಧೆಯಲ್ಲಿ ನಿರತರಾಗಿದ್ದಾರೆ ಎಂದು ನಾನು ನೀಡಿದ ದೂರನ್ನು ಸ್ವೀಕರಿಸಲು ಪೊಲೀಸರು ಒಪ್ಪುತ್ತಿಲ್ಲ. ಅವರ ಅಕ್ರಮಗಳನ್ನು ಪ್ರಶ್ನೆ ಮಾಡುತ್ತಿರುವುದಕ್ಕೆ ನನ್ನನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದಾರೆ. ಎಷ್ಟೇ ಪ್ರಕರಣಗಳನ್ನು ದಾಖಲಿಸಿದರೂ ನಾನು ಹಿಂದೆ ಸರಿಯುವುದಿಲ್ಲ‘‍ ಎಂದು ಮಣಿಕಂಠ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.