ADVERTISEMENT

ಕಲಬುರಗಿ: ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರಮಾಣ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 16:13 IST
Last Updated 4 ಅಕ್ಟೋಬರ್ 2024, 16:13 IST
ಕಲಬುರಗಿ ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು
ಕಲಬುರಗಿ ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು   

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಹಮ್ಮಿಕೊಂಡ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ 45 ಜನ ಪ್ರವಾಸಿ ಮಾರ್ಗದರ್ಶಿಗಳಿಗೆ ಈಚೆಗೆ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು.

ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಪ್ರಮಾಣ ಪತ್ರ ವಿತರಿಸಿದರು.

45 ಜನ ಪ್ರವಾಸಿ ಮಾರ್ಗದರ್ಶಿಗಳು ಪದವೀಧರರಾಗಿದ್ದಾರೆ. ಇಲಾಖೆಯ ಪ್ರವಾಸೋದ್ಯಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ADVERTISEMENT

ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಸೇರಿ ಹಲವು ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.