ADVERTISEMENT

ಚಿತ್ತಾಪುರ | ₹ 65 ಲಕ್ಷದ ಜಲಜೀವನ್ ಮಿಷನ್ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 5:14 IST
Last Updated 2 ಜುಲೈ 2024, 5:14 IST
ಚಿತ್ತಾಪುರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಸೋಮವಾರ ಜಲಜೀವನ್ ಮಿಷನ್ ಕಾಮಗಾರಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹಿಪಾಲ್ ಮೂಲಿಮನಿ ಅವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಗ್ರಾಮದ ಮುಖಂಡ ರಾಮಲಿಂಗ ಬಾನರ್ ಇದ್ದರು.
ಚಿತ್ತಾಪುರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಸೋಮವಾರ ಜಲಜೀವನ್ ಮಿಷನ್ ಕಾಮಗಾರಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹಿಪಾಲ್ ಮೂಲಿಮನಿ ಅವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಗ್ರಾಮದ ಮುಖಂಡ ರಾಮಲಿಂಗ ಬಾನರ್ ಇದ್ದರು.   

ಚಿತ್ತಾಪುರ: ‘ತಾಲ್ಲೂಕಿನ ಸಾತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ₹ 65 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಮನೆ ಮನೆಗೆ ತಲುಪಿಸುವ ಯೋಜನೆ ಜಲಜೀವನ್ ಮಿಷನ್ ಕಾಮಗಾರಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹಿಪಾಲ್ ಮೂಲಿಮನಿ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಕಾಂಗ್ರೆಸ್ ಮುಖಂಡ ರಾಮಲಿಂಗ ಬಾನರ್ ಮಾತನಾಡಿ, ‘ಚಿತ್ತಾಪುರ ಮತಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸಪರ್ವ ಪ್ರಾರಂಭಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಮುತುವರ್ಜಿಯಿಂದ ಹೊಸೂರು ಗ್ರಾಮಸ್ಥರಿಗೆ ಜಲಜೀವನ್ ಮಿಷನ್ ಯೋಜನೆಯ ಭಾಗ್ಯ ದೊರೆತಿದೆ. ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಅನುದಾನ ಸೌಲಭ್ಯ ದೊರಕಿದೆ ಎಂದು ಹೇಳಿದರು.

‘ಕ್ಷೇತ್ರದ ಪ್ರತಿಯೊಂದು ಗ್ರಾಮದ ಪ್ರತಿಯೊಂದು ಮನೆಗೆ ಶುದ್ಧವಾದ ಕುಡಿಯುವ ನೀರು ಪೂರೈಸುವ ಗುರಿ ಸಚಿವ ಪ್ರಿಯಂಕ್ ಖರ್ಗೆ ಅವರು ಹೊಂದಿದ್ದಾರೆ. ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಪ್ರತಿಯೊಂದು ಮನೆಗೆ ಪ್ರತ್ಯೇಕ ನಳದ ಸಂಪರ್ಕ ಕಲ್ಪಿಸಲಾಗುತ್ತಿದೆ. ಬರುವ ದಿನಗಳಲ್ಲಿ ಜನರಿಗೆ ತಮ್ಮ ಮನೆಯಲ್ಲಿಯೆ ಶುದ್ಧ ನೀರು ಲಭ್ಯವಾಗಲಿದೆ’ ಎಂದು ಹೇಳಿದರು.

ADVERTISEMENT

ಕಿರಿಯ ಎಂಜಿನಿಯರ್ ಭೀಮಶೇನರಾವ ಕುಲಕರ್ಣಿ, ಪಿಡಿಒ ಬಸವರಾಜ, ಮುಖಂಡ ಇಸ್ಮಾಯಿಲ್ ಚಿಂತನಳ್ಳಿ, ವಿಶ್ವನಾಥ ಸಜ್ಜನ್, ನಿಂಗರಾಜ ಸಾತನೂರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.