ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಬ್ಯಾನರ್ ಹಾಕಿದ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ₹5,000 ದಂಡ ಹಾಕಲಾಗಿದೆ.
ಅನಧಿಕೃತವಾಗಿ ಬ್ಯಾನರ್ ಹಾಕುವವರ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಪ್ರಿಯಾಂಕ್ ಸೂಚಿಸಿದ್ದರು. ಬೆಂಬಲಿಗರು ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದರಿಂದ ಈಗ ಸಚಿವರು ದಂಡ ಪಾವತಿಸಬೇಕಾಗಿದೆ.
‘ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಪಾಲಿಕೆಯ ಅನುಮತಿ ಪಡೆಯದೆ ನಗರದ ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಹಾಕಿದ್ದು ಕಂಡುಬಂದಿದೆ. ಹೀಗಾಗಿ, ಪಾಲಿಕೆಯಿಂದ ಸಚಿವರಿಗೆ ₹5,000 ದಂಡ ವಿಧಿಸಲಾಗಿದೆ’ ಎಂದು ಪಾಲಿಕೆಯ ಅಧಿಕಾರಿ ಹೇಳಿದ್ದಾರೆ.
ಈ ವಿಷಯವನ್ನು ಮನಗಂಡ ಸಚಿವರು, ಪಾಲಿಕೆಯ ಕ್ರಮವನ್ನು ಬೆಂಬಲಿಸಿ ದಂಡದ ಮೊತ್ತವನ್ನು ಪಾವತಿಸಲು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.